ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಗೆ ತಡರಾತ್ರಿ ಬೆಂಕಿ ಬಿದ್ದಿದ್ದು, ತಾಲೂಕು ಪಂಚಾಯತಿ ಕಾರ್ಯಾಲಯ ಧಗ ಧಗನೆ ಹೊತ್ತಿ ಉರಿದಿದೆ.

ಹೊಸಪೇಟೆಯ ಸಂಡೂರು ರಸ್ತೆಯಲ್ಲಿರೋ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಬೆಂಕಿ ಬಿದ್ದಿದ್ದರಿಂದ ಹಲವು ದಾಖಲೆಗಳು ಸುಟ್ಟು ಕರಕಲಾಗಿವೆ..

ಕಾರ್ಯಾಲಯದ ಸಭಾಂಗಣ ಆವರಣ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಹೊಸಪೇಟೆ ತಹಸೀಲ್ದಾರ್ ಶೃತಿ ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದು ಕಿಡಿಗೇಡಿಗಳ ಕೃತ್ಯನಾ ಅಥವಾ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯಾ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಲೂಕು ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಬಹುತೇಕ ಹಳೇಯ ಫೈಲ್‌ಗಳು ಮತ್ತು ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ.

Source link
ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ : ಹಲವು ದಾಖಲೆಗಳು ಬೆಂಕಿಗಾಹುತಿ