ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!

ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!


ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!

ಟಿ20ಯಿಂದ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಟ್ರೋಫಿಯನ್ನು ದೇವಸ್ಥಾನಕ್ಕೆ ತೆರಳಿದ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಗೆಲುವಿನ ಐಸಿಸಿ ಅಧ್ಯಕ್ಷ ಜಯ್ ಶಾ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ಟ್ರೋಫಿಯನ್ನು ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಕೀರ್ತಿ ಆಜಾದ್, ಭಾರತ ತಂಡ ಎಂಬುದು ಸೂರ್ಯ ಕುಮಾರ್, ಜಯ್ ಶಾ ಅವರ ಕುಟುಂಬ. ಅವರಿಗೆ ಇಷ್ಟ ಬಂದಂತೆ ನಡೆದುಕೊಳ್ಳಲು. ಟೀಮ್ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಕೇವಲ ಒಂದು ಧರ್ಮವಲ್ಲ ಎಂದು ಕಿಡಿಕಾರಿದ್ದಾರೆ.

1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ನಾವು ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ಆಟಗಾರರು. ನಾವು ಟ್ರೋಫಿಯನ್ನು ನಮ್ಮ ಧಾರ್ಮಿಕ ಜನ್ಮಸ್ಥಳವಾದ ನಮ್ಮ ಮಾತೃಭೂಮಿ ಹಿಂದೂಸ್ತಾನ್‌ಗೆ ತಂದಿದ್ದೆವು.

ಈಗ ಏಕೆ ಟ್ರೋಫಿಯನ್ನು ದೇವಸ್ಥಾನಕ್ಕೆ ಎತ್ತಿಕೊಂಡು ಹೋಗಿದ್ದಾರೆ? ಅದೇ ಯಾಕೆ ಮಸೀದಿಗೆ ಅಥವಾ ಚರ್ಚ್ ಇಲ್ಲಾ ಗುರುದ್ವಾರಕ್ಕೆ ತೆಗೆದುಕೊಂಡು ಹೋಗಿಲ್ಲ. ಈ ತಂಡ ಭಾರತವನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಬದಲಾಗಿ ಸೂರ್ಯ ಕುಮಾರ್ ಯಾದವ್ ಅಥವಾ ಜಯ್ ಶಾ ಅವರ ಕುಟುಂಬವಲ್ಲ!

ಇದೇ ತಂಡದಲ್ಲಿದ್ದ ಮೊಹಮ್ಮದ್ ಸಿರಾಜ್ ಟ್ರೋಫಿಯನ್ನು ಮಸೀದಿಗೆ ಎತ್ತಿಕೊಂಡು ಹೋಗಿಲ್ಲ. ಅದರಲ್ಲಿ ಭಾಗವಹಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ, ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದ ಸಂಜು ಸ್ಯಾಮ್ಸನ್ ಚರ್ಚ್ಗೆ ಹೋಗಲಿಲ್ಲ.

ಈ ಟ್ರೋಫಿಯು 1.4 ಬಿಲಿಯನ್ ಭಾರತೀಯರಿಗೆ ಸೇರಿದೆ. ಇದು ಒಂದು ಧರ್ಮದ ವಿಜಯೋತ್ಸವವಲ್ಲ! ಎಂದು ಕೀರ್ತಿ ಆಜಾದ್ ಆಕ್ರೋಶವನ್ನು ಹೊರಹಾಕಿದ್ದಾರೆ. ಕೀರ್ತಿ ಆಝಾದ್ ಅವರ ಈ ಅಭಿಪ್ರಾಯಕ್ಕೆ ಪರ-ವಿರೋಧವಾಗಿದೆ.



Source link

Leave a Reply

Your email address will not be published. Required fields are marked *