ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರ, ಉತ್ತರಕನ್ನಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಇರಾನ್ನಲ್ಲಿ 1 ಲೀ. ಹಾಲಿನ ಬೆಲೆ 8.2 ಲಕ್ಷ ರಿಯಲ್: ದಿನಬಳಕೆಯ ವಸ್ತುಗಳ ದರದಲ್ಲಿ ಭಾರಿ ಏರಿಕೆ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಈ ಸಾವು ನ್ಯಾಯವೇ: ಅಮ್ಮನ ಉಳಿಸಲು ಲಿವರ್ ಕೊಟ್ಟು ಮಗ ಸಾವು: ಆ ತಾಯಿ ಬದುಕೋದಾದರು ಹೇಗೆ?

ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: 13 ವರ್ಷಗಳ ಯಾತನೆಗೆ ಮುಕ್ತಿ: ಇದೇ ಮೊದಲ ಬಾರಿ ದಯಾಮರಣಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲ್ಯಾಂಬೋರ್ಘಿನಿ ಲವ್: ಅಮ್ಮನ ಹಿಂದೆ ಕುಳಿತು ಫಾಲೋ ಮಾಡ್ಕೊಂಡ್ ಬಂದ ಬಾಲಕನ ಆಸೆ ಈಡೇರಿಸಿದ ಉದ್ಯಮಿ

Source link
ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಸ್ವಿಫ್ಟ್ ಕಾರು: ಮೂವರು ಗಂಭೀರ