
ಪಾರಿಜಾತ ಅಥವಾ ಮಲ್ಲಿಗೆ ಹೂವುಗಳನ್ನು ಬಳಸಿ ದೇವರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮಾನಸಿಕ ಒತ್ತಡಗಳಿಂದ ಹೊರಬಂದು ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಸಣ್ಣ ತಪ್ಪು ಮಾತು ಕೂಡ ದೊಡ್ಡ ಅವಮಾನಕ್ಕೆ ಕಾರಣ ಆಗುವಂಥ ಕಡೆಗೆ ಸುಮ್ಮನೆ ಇದ್ದರೆ ಒಳಿತು. ಪ್ರೀತಿ- ಪ್ರೇಮ ವಿಚಾರಗಳು ಪ್ರಾಮುಖ್ಯ ಪಡೆದುಕೊಳ್ಳಲಿದೆ, ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಲಿವೆ. ನೀವಾಗಿಯೇ ಕರೆ ಮಾಡುವುದರ ಮೂಲಕ ಸಮಸ್ಯೆಯೊಂದು ಮೈ ಮೇಲೆ ಎಳೆದುಕೊಳ್ಳಲಾಗಿರುತ್ತದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಗ್ಯಾಜೆಟ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಮೊದಲಾದವುಗಳನ್ನು ಖರೀದಿಸಲು ಹಣ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗಿದೆ. ಹಣಕಾಸಿನ ಕೊರತೆ ಕಂಡುಬಂದಲ್ಲಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳು ನೆರವಿಗೆ ನಿಲ್ಲಲಿದ್ದಾರೆ. ನೀವೇನಾದರೂ ಈಗ ಇರುವಂಥ ಮನೆಯನ್ನು ಖಾಲಿ ಮಾಡಿ, ಹೊಸ ಮನೆಗೆ ಹೋಗಬೇಕು ಎಂದುಕೊಳ್ಳುತ್ತಿದ್ದಲ್ಲಿ ಅಂದುಕೊಂಡಂತೆ ಮನೆ ದೊರೆಯುವ ಅವಕಾಶ ಹೆಚ್ಚಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ನೀವು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ತಡವಾಗಿ ಕೆಲವು ಉದ್ಯೋಗಾವಕಾಶಗಳು ಕೈ ತಪ್ಪಿ ಹೋಗುವ ಸಾಧ್ಯತೆಗಳಿದ್ದು, ಅತಿ ಮುಖ್ಯವಾದ ವಿಚಾರಗಳು ಇದ್ದಲ್ಲಿ ತಡಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ಮದುವೆ ನಿಶ್ಚಯ ಆಗಿರುವವರು ಸಣ್ಣ- ಪುಟ್ಟ ವಿಚಾರಗಳಿಗಾಗಿ ಸಿಟ್ಟು ಮಾಡುವುದು, ಮಾತು ಬಿಡುವುದು ಇಂಥದ್ದನ್ನು ಮಾಡಬೇಡಿ.
ಲೇಖನ- ಸ್ವಾತಿ ಎನ್.ಕೆ.