
ಬೆಂಗಳೂರು, ಮಾರ್ಚ್ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್ಪ್ರತಿಭಟನೆಯಲ್ಲಿ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಫ್ರೀಡಂಪಾರ್ಕ್ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್ ನಿಂದ ಆನಂದ ರಾವ್ ಫ್ಲೈಓವರ್, ಓಲ್ಡ್ ಜೆಡಿಎಸ್ ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂಪಾರ್ಕ್ ವರೆಗೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆಗಳು.
ಪರ್ಯಾಯ ಮಾರ್ಗಗಳು
“ಸಂಚಾರ ಸಲಹೆ/ಸಂಚಾರ ಸಲಹೆ” pic.twitter.com/5AKNCuDxdM
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) ಮಾರ್ಚ್ 11, 2026
ಲುಲು ಮಾಲ್, ಕೆಎಫ್ ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್, ರೇಸ್ ಕೋರ್ಸ್ ರಸ್ತೆ.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ: ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ. ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ., ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್ ರಸ್ತೆ ಮೂಲಕ ಸಂಚರಿಸುತ್ತಾರೆ.
ಚಾಲುಕ್ಯ ಸರ್ಕಲ್ ನಿಂದ ಮೈಸೂರು ಬ್ಯಾಂಕ್ ಕಡೆಗೆ: ಚಾಲುಕ್ಯ ಸರ್ಕಲ್, ಎಲ್ ಆರ್ ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ನಿಂದ ತೆರಳುವುದು.
ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ: ಕನಕದಾಸ ಜಂಕ್ಷನ್ ಬಲ ತಿರುವು ಸಾಗರ ಜಂಕ್ಷನ್ ಕಡೆಗೆ.
ಮೌರ್ಯ ಸುಬ್ಬಣ್ಣ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ಕಡೆಗೆ: ಸುಬ್ಬಣ್ಣ ಜಂಕ್ಷನ್ ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ತೆರಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ವಾಹನ ಗಮನಕ್ಕೆ; ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ
“ಸಂಚಾರ ಸಲಹೆ”
ದೇವಸಂದ್ರ ಮಾರುಕಟ್ಟೆ ಬಳಿ ವಾಹನ ಕೆಟ್ಟು ನಿಂತಿದೆ ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರವಿದೆ.
“ಸಂಚಾರ ಸಲಹೆ”
ದೇವಸಂದ್ರ ಮಾರುಕಟ್ಟೆ ಬಳಿ ಟಿನ್ ಫ್ಯಾಕ್ಟರಿ ಕಡೆಗೆ ವಾಹನ ಸ್ಥಗಿತಗೊಂಡಿದ್ದರಿಂದ ನಿಧಾನಗತಿಯಲ್ಲಿ ಸಂಚಾರ ನಡೆಯುತ್ತಿದೆ. pic.twitter.com/fnVesOKM6w— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) ಮಾರ್ಚ್ 12, 2026
ದೇವಸಂದ್ರ ಮಾರುಕಟ್ಟೆ ಬಳಿ ವಾಹನವೊಂದು ರಸ್ತೆಯಲ್ಲಿ ಕೆಟ್ಟು ನಿಂತಿರುವ ಕಾರಣ ಟ್ರಾಫಿಕ್ ಸಮಸ್ಯೆ, ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ ಮತ್ತು ಬೆಂಗಳೂರು ಸಂಚಾರ ನಿಲ್ದಾಣಗಳ ಎಕ್ಸ್ಪೋಸ್ಟ್ಗಳ ಮೂಲಕ ಮಾಹಿತಿ ನೀಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.