
ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್ 12: ಮದ್ಯದ ನಾಶೆಯಲ್ಲಿ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ವ್ಯಕ್ತಿಯೋರ್ವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ. ಭಾಗಮಂಡಲ, ಪೊಲೀಸ್ ಠಾಣಾ ಘಟನೆ ನಡೆದಿದೆ.
ಅವಳಿ ಕೊಲೆ ಆರೋಪಿಗೆ ಮರಣದಂಡನೆ
ಮಹಿಳೆಯೋರ್ವಳ ಜೊತೆಗಿನ ಅನೈತಿಕ ಸಂಬಂಧದ ವಿಚಾರವಾಗಿ ಆಕೆ ಮತ್ತು ಅವಳ ಪತಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2019ರ ಆಗಸ್ಟ್ 30ರಂದು ಮನೆಯಲ್ಲಿ ಮಲಗಿದ್ದ ಗಂಡ-ಹೆಂಡತಿಯನ್ನು ಆರೋಪಿ ಗೋವಿಂದಪ್ಪ ಎಂಬಾತನ ಹತ್ಯೆ ಮಾಡಲಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ಸಾತ್ಕೋಳಿಯಲ್ಲಿ ನಡೆದ ಗ್ರಾಮಕ್ಕೆ ಗ್ರಾಮವನ್ನೇ ಬೆಚ್ಚಿಬೀಳಿಸಿತು. ಆರೋಪಿ ಮಚ್ಚಿನಿಂದ ದಾಳಿ ನಡೆಸಿದ್ದ ಪರಿಣಾಮ ಧರ್ಮಯ್ಯ (53) ಮತ್ತು ಭಾರತಿ (33) ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: 10 ದಿನಗಳ ಕಾಡಾನೆ ದಾಳಿಗೆ ಎರಡನೇ ಬಲಿ; ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು
ಭಾರತಿಯ ಆರೋಪಿ ಗೋವಿಂದಪ್ಪನಿಗೆ ಅಕ್ರಮ ಸಂಬಂಧವಿತ್ತು. ಇದೇ ವಿಚಾರವಾಗಿ ಗೋವಿಂದಪ್ಪನ ಜೊತೆ ಭಾರತಿ ಪತಿ ಧರ್ಮಯ್ಯ ಜಗಳವಾಡಿದ್ದರು. ಬಳಿಕ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಪಂಚಾಯತಿ ಕೂಡ ನಡೆದಿತ್ತು. ಗಲಾಟೆ ನಡೆದ ಎರಡು ತಿಂಗಳ ಬಳಿಕ ಭಾರತಿ ಮತ್ತು ಪತಿ ಧರ್ಮಯ್ಯನನ್ನು ಗೋವಿಂದಪ್ಪ ಹತ್ಯೆ ಮಾಡಿದ್ದು, ಈ ಬಗ್ಗೆ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಹತ್ವದ ತೀರ್ಪು ನೀಡಿರುವ ನ್ಯಾಯಾಲಯ ಆರೋಪಿಗೆ ಮರಣದಂಡನೆ ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.