
ಬೆಂಗಳೂರು, ಮಾರ್ಚ್ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರಸ್ತೆಯು ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ಮಾಡುವುದನ್ನು ರದ್ದುಪಡಿಸುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ರಾಮೋಜಿ ಗೌಡ ಅವರು ನೈಸ್ ರಸ್ತೆ ಯೋಜನೆಗಾಗಿ ಭೂಮಿ ನೀಡಿದ ರೈತರಿಗೆ ಪರಿಹಾರ ವಿಷಯವನ್ನು ಪ್ರಸ್ತಾಪಿಸಿದ ಸಂದರ್ಭದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳು ಹೆಚ್ಚುತ್ತಿವೆ, ಜೊತೆಗೆ ರಸ್ತೆ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ರಾಮೋಜಿ ಗೌಡ ಆರೋಪಿಸಿದ್ದು, ರಾಜ್ಯ ಸರ್ಕಾರ ಮತ್ತು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ನಡುವೆ ಒಪ್ಪಂದ ಮಾಡಿಕೊಂಡಿರುವ ಒಪ್ಪಂದ ಮುಕ್ತಾಯವಾಗುತ್ತಿದೆ. ಹೀಗಿದ್ದರೂ ಭೂಮಿ ನೀಡಿದ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಒಪ್ಪಂದದಲ್ಲಿ ಯಾವ ಷರತ್ತುಗಳನ್ನು ವಿಧಿಸಲಾಗಿದೆ ಮತ್ತು ಅದನ್ನು ನವೀಕರಿಸಲಾಗಿದೆ ಅದನ್ನು ಕುರಿತು ಮಾಹಿತಿ ನೀಡುವಂತೆ ಅವರು ಕೇಳಿದ್ದರು. ಜೊತೆಗೆ ಟೋಲ್ ದರ ಕಂಪನಿಗೆ ಸರ್ಕಾರದ ಅನುಮೋದನೆ ಪಡೆದಿದೆಯೇ ಹಾಗೂ ನೈಸ್ ರಸ್ತೆಯ ಸರ್ಕಾರದ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸುತ್ತಿದೆಯೇ ಎಂಬ ಪ್ರಶ್ನೆಯನ್ನು ಅವರು ಕೇಳಿದ್ದರು.
ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ; ಫ್ರೀಡಂ ಪಾರ್ಕ್ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ
ಇದಕ್ಕೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಗೃಹ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಚಿವ ಸಂಪುಟದ ಉಪ ಸಮಿತಿ ಯೋಜನೆ ಸ್ಥಿತಿ, ಒಪ್ಪಂದದ ಷರತ್ತುಗಳು, ಟೋಲ್ ವಸೂಲಿ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಲಾಗಿದೆ. ಉಪ ಸಮಿತಿ ತನ್ನ ವರದಿ ಸಲ್ಲಿಸಿದ ಬಳಿಕ ದ್ವಿಚಕ್ರ ವಾಹನಗಳಿಗೆ ಟೋಲ್ ರದ್ದುಪಡಿಸುವ ಯೋಜನೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.