
ಕೊಪ್ಪಳ, ಮಾರ್ಚ್ 12: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ (ಸಾವು) ಮಾಡಿಕೊಂಡಿರುವಂತಹ ಘಟನೆ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ನಡೆದಿದೆ. ಹುಲಿಗೆವ್ವ(9), ವಿಜಯಮ್ಮ(8) ಜೊತೆ ತಾಯಿ ಬಾಳವ್ವ(35) ಆತ್ಮಹತ್ಯೆ ಮಾಡಿಕೊಂಡವರು. ಯಲಬುರ್ಗಾ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಯುವಕ ಮನೆಯಲ್ಲಿ ನೇಣಿಗೆ ಶರಣು
ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‌ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೇತನ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ಸಂಬಂಧ ಮಾದನಾಯಕನಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಆಸ್ಪತ್ರೆಗೆ ಶವಾಗಾರಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ: ಮಡಿಕೇರಿ ಡಬಲ್ ಮರ್ಡರ್ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ
ನಾನು ಖಾಸಗಿ ಮನೆ ವ್ಯಾನ್ ಮೆನೇಜ್ಮೆಂಟ್ ನಿರ್ವಹಣೆ ಮಾಡುತ್ತಿರುವ ಚೇತನ್, ಬಿಟ್ಟು ಹೋಗುತ್ತೇನೆ, ಇಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತನಿಗೆ ಮೆಸೇಜ್ ಮಾಡಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದಿತ್ತು. ನಿವಾಸಿ ಹಿಮವನ ಲೇಔಟ್ ನಿವಾಸಿ 40 ವರ್ಷದ ದೇವಿಪ್ರಸಾದ್ ಸಾವನ್ನಪ್ಪಿದ ವ್ಯಕ್ತಿ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಇವರು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ: ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಕಾಫಿ ಬೆಳೆಗಾರ
ಕಳೆದ ಕೆಲವು ದಿನಗಳಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ತಮ್ಮ ಕೋವಿಯೊಂದಿಗೆ ಮನೆಯಿಂದ ಹೊರ ಬಂದು ರಸ್ತೆಬದಿಯಲ್ಲೇ ಗುಡುಗು ಹಾರಿಸಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.