
ಬೆಂಗಳೂರು, (ಮಾರ್ಚ್ 12): ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕರ್ನಾಟಕದ (ಕರ್ನಾಟಕ) ವಿವಿಧ ಜೈಲಿನಲ್ಲಿರುವ ಒಟ್ಟು 31 ಕೈದಿಗಳು (ಕೈದಿಗಳು) ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆ ಇಂದು (ಮಾರ್ಚ್ 12) ರಾಜ್ಯ ಸರ್ಕಾರದ ಮಹತ್ವದ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ಮಾನವೀಯ ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ, ನಾಳೆ (ಮಾರ್ಚ್ 13) 31 ಕೈದಿಗಳು ಜೈಲಿನಿಂದ ಹೊರಬರಲಿದ್ದಾರೆ.
ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಸಮಿತಿಯ ಮಹಾನಿರ್ದೇಶಕರು ನೀಡಿದ ಪ್ರಸ್ತಾವನೆಯನ್ನು ಆಧರಿಸಿ, ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಗಳ ಸಭೆಯಲ್ಲಿ ಒಟ್ಟು 54 ಜೀವಾವಧಿ ಶಿಕ್ಷೆಯ ಪ್ರಕರಣಗಳ ಕೂಲಂಕಷವಾಗಿ ಚರ್ಚಿಸಲಾಗಿದೆ, ಅವಧಿಯು ಪರಿಶೀಲಿಸಿದ 54 ಪ್ರಕರಣಗಳ ಬಿಡುಗಡೆಗೆ 31 ಮಂದಿ ಶಿಫಾರಸ್ಸು ಮಾಡಲಾಗಿದೆ. ಇನ್ನುಳಿದಂತೆ 21 ಕೈದಿಗಳ ಬಿಡುಗಡೆ ಅರ್ಜಿಯನ್ನು ತಿರಸ್ಕರಿಸಲಾಗಿದೆ. 2 ಪ್ರಕರಣಗಳು ಕೇಂದ್ರ ಗೃಹ ಸಚಿವಾಲಯದ ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್
ಸಂವಿಧಾನವು ರಾಜ್ಯಪಾಲರಿಗೆ ಶಿಕ್ಷೆಗೊಳಗಾದ ಕೈದಿಗಳ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವ ಅಥವಾ ಕ್ಷಮಾದಾನ ನೀಡುವ ವಿಶೇಷ ಅಧಿಕಾರವನ್ನು ನೀಡಿದೆ. ದೀರ್ಘಕಾಲದವರೆಗೆ ಜೈಲುವಾಸ ಅನುಭವಿಸಿ, ಪಶ್ಚಾತ್ತಾಪದೊಂದಿಗೆ ಉತ್ತಮ ನಡವಳಿಕೆಯನ್ನು ಪಡೆದ ಕೈದಿಗಳನ್ನು ಸಮಾಜಕ್ಕೆ ಮರಳಿಸುತ್ತದೆ ಹಾಗೂ ಅವರ ಕುಟುಂಬದ ಪುನರ್ವಸತಿಗೆ ಅವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ನೀತಿಗಳಲ್ಲಿ ಒಂದಾಗಿದೆ. ಈ ಆಶಯದಡಿಯೇ ಬಿಡುಗಡೆ ಮಾಡಲಾಗುತ್ತಿದೆ.
ಯಾವ ಕಾರಾಗೃಹದಿಂದ ಎಷ್ಟು ಕೈದಿಗಳ ಬಿಡುಗಡೆ?
- ಬೆಂಗಳೂರು ಕೇಂದ್ರ ಕಾರಾಗೃಹ: 14 ಕೈದಿಗಳು
- ವಿಜಯಪುರ: 5 ಕೈದಿಗಳು
- ಬಳ್ಳಾರಿ: 3 ಕೈದಿಗಳು
- ಮೈಸೂರು: 2 ಕೈದಿಗಳು
- ಬೆಳಗಾವಿ: 2 ಕೈದಿಗಳು
- ಕಲಬುರಗಿ: 2 ಕೈದಿಗಳು
- ಶಿವಮೊಗ್ಗ (ಪುರುಷ ಮತ್ತು ಮಹಿಳಾ ವಿಭಾಗ): 2 ಕೈದಿಗಳು
- ಧಾರವಾಡ: 1 ಕೈದಿ
ಅವಧಿ ಪೂರ್ವ ಪ್ರಾರಂಭವಾಗುತ್ತಿರುವ ಕೈದಿಗಳು
ಶ್ರೀನಿವಾಸ್ ಅಲಿಯಾಸ್ ಡ್ರೈವರ್ ಶ್ರೀನಿವಾಸ್, ಬಾಲರಾಜು, ವೆಂಕಟೇಶ್, ರಂಜಿತ್ @ ಬಟ್ಟ, ಭುವನೇಶ್ವರ ಟಿಪಿ, ಛತ್ರಪತಿ ನಾಯಕ್, ಲಿಂಗರಾಜು, ಶ್ರೀನಿವಾಸ್ ಮೂರ್ತಿ, ಯಮನಪ್ಪ, ನೀಲಕಂಠಾಚಾರ್ @ ಶಂಕರ್, ಬಾಬು, ರಾಜಾಚಾರಿ, ನಾರಾಯಣಗೌಡ, ಸುರೇಶ್, ವೆಂಕಟೇಶ್, ಚಂದ್ರಮ್ಮ, ತುಕಾರಾಮ್, ಜಯಮ್ಮ, ಸುಭಾಷ್, ತಿಪ್ಪ, ಅಶೋಕ್, ಹೆಚ್. ಜಿ.ಎಲ್ ಮೋಹನ್ ಕುಮಾರ್, ಮಂಜೆ ನಾಯ್ಕ್, ಲಕ್ಷ್ಮಿ ಕಾಂತ್, ಸರಸ್ವತಿ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುತ್ತಿದ್ದಾರೆ.