
ಬೆಂಗಳೂರು, ಮಾರ್ಚ್ 13: ಇವಿ ಬೈಕ್ (EV ಬೈಕ್) ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಕೇಶ್ ಹಾಗೂ ಹನುಮಂತರಾಜು ಬಿಲ್ಕರ್ ಎಂದು ಗುರುತಿಸಲಾಗಿದೆ. ರಾಕೇಶ್ ಅವರನ್ನು ಪೀಣ್ಯಾ ಬಂಧಿಸಿದ್ದು, ಹನುಮಂತರಾಜು ಬಿಲ್ಕರ್ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮೋದಿ ಸ್ಕೀಮ್ ಹೆಸರಿನಲ್ಲಿ ವಂಚನೆ
ಮೋದಿ ಸ್ಕೀಮ್ ಹೆಸರಿನಲ್ಲಿ 3250 ಇವಿ ಬೈಕ್ ಮಾರಾಟ ಮಾಡುವ ನೆಪದಲ್ಲಿ ಸುಮಾರು 35 ಸಾವಿರ ರೂಪಾಯಿ ಮೌಲ್ಯದ ಬೈಕ್‌ಗೆ ಒಂದೂವರೆ ಲಕ್ಷ ರೂಪಾಯಿ ಬಿಲ್ ಮಾಡಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ. ಸಬ್ಸಿಡಿ ಸೌಲಭ್ಯ ದೊರೆಯುತ್ತದೆ ಎಂದು ಕೋಟಿ ಕೋಟಿ ರೂಪಾಯಿ ಲೂಟಿ ನಂಬಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗ್ರಾಹಕರಿಂದ ಕೇವಲ 20 ಸಾವಿರ ರೂಪಾಯಿ ಡಿಪಾಸಿಟ್ ಪಡೆದು ಅವರ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಬಳಿಕ ಆ ದಾಖಲೆಗಳನ್ನು ಬಳಕೆದಾರರ ಹೆಸರಿನಲ್ಲಿ ಕೊಟಾಕ್ ಮಹೇಂದ್ರಾ ಬ್ಯಾಂಕ್‌ನಲ್ಲಿ ಸುಮಾರು 1.5 ಲಕ್ಷ ರೂಪಾಯಿ ಸಾಲ ಮಾಡಿಸಲಾಯಿತು. ಇದೆ ಹಣವನ್ನು ಇವಿ ಶೋರೂಮ್ ಪಡೆಯಲು ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಇದನ್ನೂ ಓದಿ ಬಸ್ ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ
‘ಆಪ್ಕಿ ಇವಿ’ ಶೋರೂಮ್‌ನಿಂದ ಹೊರಬಂದ ರಾಕೇಶ್ ಮತ್ತು ಹನುಮಂತರಾಜು ಈ ವಂಚನೆಯ ಪ್ರಮುಖ ಆರೋಪಿಗಳಾಗಿದ್ದು, ಪ್ರಕರಣದಲ್ಲಿ ಕೊಟಾಕ್ ಮಹೀಂದ್ರಾ ಬ್ಯಾಂಕ್‌ನ ಮ್ಯಾನೇಜರ್ ಶಂಕಿತರಾಗಿದ್ದಾರೆ. ಈ ಸಂಬಂಧ ಬಾಗಲಗುಂಟೆ ಹಾಗೂ ಪೀಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವರದಿ: ಮಂಜುನಾಥ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.