Headlines

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ


ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್ ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್ ವಾಣಿಜ್ಯ ಬಳಕೆಗೆ ಬಳಸುತ್ತಿರುವ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ಸೂಚಿಸಿದರು. ಇಂತಹ ಅಕ್ರಮಗಳ ವಿರುದ್ಧ ಇದೀಗ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *