Headlines

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು


ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (ಬಾಗಲಕೋಟ) ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣು ಮಕ್ಕಳ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11 ರಂದು ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿಯ ಮೇಲೆ ಕುಳಿತು ಕೆಳಗಿದ್ದ ಕಾರ್ಯಕ್ರಮದ ಕಲ್ಲು ಎಸೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ವಿದ್ಯಾರ್ಥಿನಿಯರು ಉಡುಪು ಬದಲಾಯಿಸುತ್ತಿದ್ದ ಸ್ಥಳದತ್ತ ಇಣುಕಿ ನೋಡಿದ್ದಾನೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಕೆಲ ಯುವಕರು ಸುದೀಪ್ ಮೇಲೆ ಹಲ್ಲೆ ನಡೆಸಿದ್ದರು.

ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬ ಮೂವರು ಯುವಕರು ಸುದೀಪ್‌ಗೆ ಥಳಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ಕ್ಯಾಮರಾ ವಿಡಿಯೋ ಇಲ್ಲಿ ನೋಡಿ

ಹಲ್ಲೆಯಿಂದ ಸುದೀಪ್ ಪಾಂಗೆಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿದೆ ಎಂದು ಸೂಚಿಸಲಾಗಿದೆ.

ಮೃತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಜಾತಿ ನಿಂದನೆ ಮಾಡಿ ರಾಜು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಿಜಿಗಳಲ್ಲಿ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್ ಕೊರತೆ ಮತ್ತಷ್ಟು ಉಲ್ಬಣ

ಈ ಘಟನೆ ಮಂಗಳವಾರ (ಮಾರ್ಚ್ 11)ರಂದು ನಡೆದಿದ್ದು, ಪ್ರಕರಣ ಈಗ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಸಾವಳಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *