Headlines

‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ


'ಆಕಾಶ್' ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್‌ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (ಆಕಾಶ್ ಚಿತ್ರ) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್‌ಗೆ ಹಾಲಿನ ಅಭಿಷೇಕ. ಪುನೀತ್ ರಾಜ್ ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17 ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಿದ್ದಾರೆ. ಪುನೀತ್ (ಪುನೀತ್ ರಾಜ್‌ಕುಮಾರ್) ಕುಟುಂಬದ ಸದಸ್ಯರು ಮತ್ತು ನಟಿ ರಮ್ಯಾ ಕೂಡ ಚಿತ್ರಮಂದಿರಕ್ಕೆ ಬಂದು ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿಯಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *