
ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.