Headlines

76 ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರವಾಗಿ ಹತ್ಯೆ

76 ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರವಾಗಿ ಹತ್ಯೆ


76 ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿ ವೃದ್ಧನ ಭೀಕರವಾಗಿ ಹತ್ಯೆ

ವಡಗೇರ, ಮಾ.14: ತನ್ನ ಪಾಡಿಗೆ ತಾನು ಜಮೀನಿನಲ್ಲಿ ಮನೆಯಲ್ಲಿ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. 76 ವರ್ಷದ ಹಂಪಣ್ಣ ಸಜ್ಜನ ಕೊಲೆಯಾದ ದುರ್ದೈವಿ. ಹಂಪಣ್ಣ ಸಜ್ಜನ ಅವರಿಗೆ ಮೂವರು ಗಂಡು ಮಕ್ಕಳಿದ್ದು, 15 ವರ್ಷಗಳ ಹಿಂದೆಯೇ ಆಸ್ತಿ ಹಂಚಿಕೆ ಮಾಡಿ ತನಗಾಗಿ 12 ಜಮೀನು ಉಳಿಸಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಪತ್ನಿ ನಿಧನರಾದ ಬಳಿಕ, ಮಕ್ಕಳು ಗ್ರಾಮದಲ್ಲಿದ್ದರೂ ಹಂಪಣ್ಣ ಜಮೀನಿನಲ್ಲಿ ಪುಟ್ಟ ಮನೆ ನಿರ್ಮಿಸಿಕೊಂಡು ಒಬ್ಬಂಟಿಯಾಗಿ ವಾಸವಿದ್ದರು.

ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಹಂಪಣ್ಣ ಮಲಗಿದ್ದಾಗ ಕಲ್ಲಿನಿಂದ ತಲೆ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಗ್ರಾಮಕ್ಕೆ ಹಾಲು ಪಡೆಯಲು ವೃದ್ಧ ಬಾರದಿದ್ದಾಗ ಅನುಮಾನಗೊಂಡು ಜಮೀನಿಗೆ ಹೋಗಿ ನೋಡಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ವಡಗೇರ ತಪಾಸಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಪ್ರಾಥಮಿಕ ತನಿಖೆ ವೇಳೆ, ಹಂಪಣ್ಣ ಅವರು ಪರ ಸ್ತ್ರೀಯರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಂದ ಲಭ್ಯವಾಗಿದೆ. ಇದೇ ಕಾರಣಕ್ಕೆ ಕೊಲೆ ಮಾಡಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಯಾದಗಿರಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *