
ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಸೇರಿದೆ. ಖಾಸಗಿ ಆಸ್ಪತ್ರೆ ನರ್ಸ್ ಎಂದು ಹೇಳಿಕೊಂಡು ಕಷ್ಟ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜೊತೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳು ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಮಹಿಳೆ, “ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿದೆ.
ಈ ಬಗ್ಗೆ ನ್ಯಾಯ ಪಡೆಯಲು ನಾವು ವಕೀಲರ ಮನೆಗೆ ಹೋಗಿದ್ದೆವು. ಆದರೆ ಆ ವ್ಯಕ್ತಿ ತನ್ನ ಕೃತ್ಯವನ್ನು ಬಹಿರಂಗಗೊಳಿಸುವುದಿಲ್ಲವೋ ಎಂಬ ಭಯದಿಂದ, ತಾನೇ ನನ್ನ ಮಾನಭಂಗ ಮಾಡಿ ಈಗ ಪೊಲೀಸರು ನಮ್ಮನ್ನು ಬಂಧಿಸುವಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಹನಿಟ್ರ್ಯಾಪ್ ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಜೀವನದ ಜೊತೆ ಆಟವಾಡುತ್ತಿದ್ದಾರೆ” ಎಂದು ಬಿಳಿಚೋಡು ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ:
ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಬಡ ಹೆಣ್ಣು ಮಕ್ಕಳ ಮತ್ತು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುವ ಪ್ರಭಾವಿಗಳಿಗೆ ಶಿಕ್ಷೆಯಾಗಬೇಕು ಎಂದು ಆರೋಪಿತರು ಪೂರ್ವ ವಲಯ ಐಜಿಪಿ (ಐಜಿಪಿ) ಅವರಿಗೆ ಸಮಗ್ರ ತನಿಖೆ ಕೋರಿ ಮನವಿ ಸಲ್ಲಿಸಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ಗೆ ದೂರು ನೀಡಲಾಗಿದೆ. ಆದರೆ ಈಗ ಆರೋಪಿಗಳೇ ತಿರುಗಿಬಿದ್ದು ತಮಗಾದ ಅನ್ಯಾಯದ ಬಗ್ಗೆ ದ್ವನಿ ಎತ್ತಿರುವುದು ಪ್ರಕರಣವನ್ನು ಮತ್ತಷ್ಟು ನಿಗೂಢಗೊಳಿಸಿದೆ.
ಇದನ್ನೂ ಓದಿ: ಕಷ್ಟ ಅಂತ ಹೇಳಿಕೊಂಡು ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್: ನರ್ಸ್ ಸೇರಿ ನಾಲ್ವರು ಅರೆಸ್ಟ್
ಹನಿಟ್ರ್ಯಾಪ್ ನಡೆಸಿದ ಯಾರನ್ನು? ಹೇಗೆ?
ನಗರದ ಪ್ರತಿಷ್ಠಿತ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ, ಅವರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಹನಿಟ್ರ್ಯಾಪ್ ಜಾಲವನ್ನು ದಾವಣಗೆರೆ ಪತ್ತೆ ಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ನರ್ಸ್ ಹಾಗೂ ಚನ್ನಬಸಪ್ಪ ಸೇರಿದಂತೆ ಮೂವರು ಪುರುಷರನ್ನು ಬಂಧಿಸಲಾಗಿದೆ. ಆರೋಪಿ ಮಹಿಳೆಯು ತಾನು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾಳೆ ಎಂದು ಉದ್ಯಮಿಯ ಬಳಿ ಸಹಾಯ ಕೇಳಿದಳು. ಪರಿಚಯ ಬೆಳೆಸಿಕೊಂಡು ನಂಬಿಕೆ ಗಳಿಸಿದ ಬಳಿಕ, ಉದ್ಯಮವನ್ನು ಏಕಾಂತಕ್ಕೆ ಕರೆಸಿಕೊಳ್ಳಲಾಯಿತು. ಉದ್ಯಮಿ ಮಹಿಳೆಗೆ ಇದ್ದ ಸಂದರ್ಭವನ್ನು ಆರೋಪಿಗಳ ತಂಡ ರಹಸ್ಯವಾಗಿ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿತ್ತು. ವಿಡಿಯೋ ಸಿದ್ಧವಾಗುತ್ತಿದ್ದಂತೆ ತನ್ನ ಅಸಲಿ ರೂಪ ತೋರಿಸಿದ ತಂಡ, “ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇವೆ ಮತ್ತು ಕುಟುಂಬದವರಿಗೆ ತಿಳಿಸುತ್ತೇವೆ” ಎಂದು ಘೋಷಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಉದ್ಯಮಿ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಲೆ ಬಿಸಿ ನರ್ಸ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದರು. ಇದೀಗ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ, ಪ್ರಭಾವಿ ವ್ಯಕ್ತಿಯ ಕೈವಾಡ ಇದೆ ಎಂದು ಹೇಳಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ