
ರಾಮನಗರ, (ಮಾರ್ಚ್ 14): ಇದೇ ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ 2026ನೇ ಸಾಲಿನ ರಾಜ್ಯ ಬಜೆಟ್ ಗೆ ಆಡಳಿತರೂಢ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಹೌದು…ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಮಾತನಾಡಿ ರಾಜ್ಯ ಬಜೆಟ್ ನನಗೆ ಸಮಾಧಾನ ತಂದಿಲ್ಲ. ಮುಖ್ಯ ಮಂತ್ರಿಯವರ ಮೇಲಿನ ಭರವಸೆ ಹುಸಿಯಾಗಿದೆ ಎಂದು ಸಿದ್ದರಾಮಯ್ಯ ಮೇಲೆ ಅಸಮಾಧಾನ ಹೊರಹಾಕಿದ್ದು, ಈ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಜೆಟ್ ಬಗ್ಗೆ ಅಸಮಾಧಾನಗೊಂಡಿರುವುದ್ಯಾಕೆ ಎನ್ನುವುದಕ್ಕೆ ಇಕ್ಬಾಲ್ ಹುಸೇನ್ ಕಾರಣ ನೀಡಿದ್ದು, ತಮ್ಮ ಕ್ಷೇತ್ರಕ್ಕೆ ಅನುದಾನ ನೀಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಇಕ್ಬಾಲ್ ಹುಸೇನ್, ನನ್ನ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಯಾರು ಏನಾದರೂ ಹೇಳಲಿ. ನಾನು ಸಿಎಂ ಹಾಗೂ ಡಿಸಿಎಂ ಇಬ್ಬರ ಜೊತೆಗೂ ಚರ್ಚೆ ಮಾಡಿದ್ದೇನೆ. ನನ್ನ ಕ್ಷೇತ್ರದ ಬಗ್ಗೆ ತೊಡಿಸಿಕೊಂಡ ನೋವಿಗೆ ಪ್ರತಿಫಲ ಸಿಕ್ಕಿಲ್ಲ. ನಾನು ಮಾತನಾಡಿದ್ದೇನೆ ಎಂದು ಸಮಜಾಯಿಷಿ ತಿಳಿಸಿದ್ದಾರೆ.