
ಚಿತ್ರದುರ್ಗ, ಮಾರ್ಚ್ 14: ನಾಗರಹಾವು ಕಡಿತಕ್ಕೊಳಗಾಗಿ (ಹಾವು ಕಡಿತ) ಒಂದನೇ ತರಗತಿಯ ವಿದ್ಯಾರ್ಥಿನಿಯರ ಸ್ಥಿತಿ ಉತ್ತಮ ರೀತಿಯ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲೆಯಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ ಶಾಲಾ ಶಿಕ್ಷಕ ರವಿಶಂಕರ್ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥಗೊಂಡ ಸೃಷ್ಟಿಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ರವಿಶಂಕರ್ ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು: ಮತ್ತೊಬ್ಬನ ರಕ್ಷಣೆ
ಮಂಡ್ಯದ ಮಳವಳ್ಳಿ ಪಟ್ಟಣದ ದೊಡ್ಡಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸಾವನ್ನಪ್ಪಿದ್ದು, ಮತ್ತೊಬ್ಬ ಪ್ರಾಣಪಾಯದಿಂದ ಪಾರಾದಂತಹ ಘಟನೆ ನಡೆದಿದೆ. ಕೇಶವ(11) ಸಾವು, ಹೇಮಂತ್(12) ರಕ್ಷಣೆ ಪಡೆದ ವಿದ್ಯಾರ್ಥಿ.
ಇದನ್ನೂ ಓದಿ: ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕಂಡ್ರಾ?
ಕೇಶವ ಮತ್ತು ಹೇಮಂತ್ ಮಳವಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಪರೀಕ್ಷೆ ಮುಗಿಸಿ ಕೆರೆಗೆ ಈಜಲು ಹೋದಾಗ ಅವಘಡ ಸಂಭವಿಸಿದೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ಘಟನೆ ನಡೆದಿದೆ.
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೇರೂರು ಬಳಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರಿನ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ವಿದ್ಯಾರ್ಥಿಗಳ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದರು. ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸುದರ್ಶನ್(22) ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವು
ಬೈಕ್ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಹೊರವಲಯದ ಇಂಡಸ್ಟ್ರಿಯಲ್ ಏರಿಯಾ ಬಳಿ ನಡೆದಿದೆ. ಹೊಸಹಳ್ಳಿ ಗ್ರಾಮದ ಮಲ್ಲಿಕಾರ್ಜುನ (21) ಮೃತ ದುರ್ದೈವಿ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!
ತನ್ನ ಅಜ್ಜಿಯನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಬೈಕ್ ನಲ್ಲಿ ತನ್ನ ಹೊಸಹಳ್ಳಿ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ. ಬೈಕ್ ಅಡ್ಡ ಬಂದ ಬ್ರೇಕ್ ಹಾಕಿದ್ದಕ್ಕೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.