
ನೆಲಮಂಗಲ, ಮಾರ್ಚ್ 14: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರವಿದೆ. ನವಿಲುಗಳಿಗೆ ವಿಷ ಪ್ರಾನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.