Headlines

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!


ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (ಕರ್ನಾಟಕ) ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗಿ, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮಕ್ಕೆ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್‌ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗಾಗಿ ಈಗ ಹೋಟೆಲ್ಲು ಪರದಾಡುವಂತ ಸ್ಥಿತಿ ಎದುರಾಗಿದೆ. ಈ ಕೊರತೆಯನ್ನು ಕೆಲವು ದಂಧೆಕೋರರು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರ್ ಅನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ ಎಂದು ಹೋಟೆಲ್ ಆರೋಪಿಸಿದೆ. ಮೀನಾಕ್ಷಿ ಕಾಫಿ ಬಾರ್ ಮಾಲೀಕ ಸುನೀಲ್ ಮಾತನಾಡಿ, ಇದು ಕೃತಕ ಅಭಾವ ಸೃಷ್ಟಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಮೈಸೂರಿನಲ್ಲೂ ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ಸಿಲಿಂಡರ್‌ಗೆ 4 ರಿಂದ 5 ಸಾವಿರ ರೂಪಾಯಿ ವರೆಗೆ ಹಣ ಎಂದು ಕೆಲ ಹೋಟೆಲ್ ಗಳಿಸಿ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರು ಹೋಟೆಲ್‌ಗಳಲ್ಲಿ ತಿಂಡಿ ದರ

ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೀಡಾದ ಹೋಟೆಲ್ ಅದರ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಶಿವಾನಂದ ಸರ್ಕಲ್‌ನಲ್ಲಿರುವ ಬೆಂಗಳೂರು ಕಫೆಯಲ್ಲಿ ಉಪಹಾರಗಳ ಬೆಲೆಯನ್ನು 10 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಲಾಲ್‌ಬಾಗ್ ರಸ್ತೆಯಲ್ಲಿರುವ ಸತ್ಕಾರ್ ಹೋಟೆಲ್‌ನಲ್ಲಿ ಗ್ಯಾಸ್ ಕೊರತೆಯಿಂದ ಸೌದೆ ಓಲೆ ಬಳಸಿ ಅಡುಗೆ ಮಾಡಲಾಗುತ್ತಿದೆ. ಜೊತೆಗೆ ಊಟ ಮತ್ತು ತಿಂಡಿಗಳ ಬೆಲೆಯನ್ನೂ 5 ರಿಂದ 20 ರೂಪಾಯಿಗೆ ಹೆಚ್ಚಿಸಲಾಗಿದೆ.

ಗೃಹ ಬಳಕೆಯ ಎಲ್ಪಿಜಿ ವಾಣಿಜ್ಯ ಉದ್ದೇಶಕ್ಕೆ ಬಳಕೆ: ಹಲವೆಡೆ ದಾಳಿ

ಇನ್ನೂ ಕೆಲವು ಕಡೆ ವಾಣಿಜ್ಯ ಸಿಲಿಂಡರ್ ಸಿಗದ ಕಾರಣ ಗೃಹಬಳಕೆಯ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಈ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಜ್ಯಾದ್ಯಂತ ದಾಳಿ ನಡೆಸಿ ಹಲವು ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದೆ. ಬೆಂಗಳೂರಿನ ಪೀಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209, ಶಿವಮೊಗ್ಗದಲ್ಲಿ 3, ಯಾದಗಿರಿಯಲ್ಲಿ 46 ಮತ್ತು ದಾವಣಗೆರೆಯಲ್ಲಿ 13 ಸಿಲಿಂಡರ್ ಸೇರಿ ಒಟ್ಟು 316 ಸಿಲಿಂಡರ್‌ಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ 20 ಶೇಕಡಾ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು, ಬಸ್ ನಿಲ್ದಾಣದ ಕ್ಯಾಂಟೀನ್‌ಗಳು, ದೇವಸ್ಥಾನಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆಹಾರ ಇಲಾಖೆ.

ಬೆಂಗಳೂರಿನ ಹಲವು ಹೋಟೆಲ್‌ಗಳು ಬಂದ್

ಸಿಲಿಂಡರ್ ಕೊರತೆಯಿಂದ ಕೆಲವು ಹೋಟೆಲ್‌ಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಿಸುತ್ತಿದೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್‌ನಲ್ಲಿರುವ ಕೃಷ್ಣಸಾಗರ್ ಹೋಟೆಲ್, ಶೇಷಾದ್ರಿಪುರನ್ನ ಹೋಟೆಲ್ ಸನ್ಮಾನ ಮತ್ತು ಬಸವನಗುಡಿಯ ಬೈಟು ಕಾಫಿ ಹೋಟೆಲ್ ತಾತ್ಕಾಲಿಕವಾಗಿ ಬಂದ್ ಆಗಿವೆ.

ಆದರೆ ಕೆಲವು ಹೋಟೆಲ್ ಪರ್ಯಾಯ ವ್ಯವಸ್ಥೆ ಕಂಡುಬಂದಿದೆ. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಇರುವ ಶುಭಂ ಹೋಟೆಲ್‌ನಲ್ಲಿ ಇದ್ದಿಲು ಬಳಸಿ ಅಡುಗೆ ಮಾಡಲಾಗುತ್ತಿದೆ. ಚಿತ್ರದುರ್ಗದ ಕೆಲವು ಹೋಟೆಲ್‌ಗಳಲ್ಲಿ ಆಧುನಿಕ ಓಲೆಗಳನ್ನು ಬಳಸಿ ಅಡುಗೆ ಸಿದ್ಧಪಡಿಸಲಾಗುತ್ತಿದೆ.

ಈ ಕಲಬುರಗಿಯ ಶರಣಬಸವೇಶ್ವರ ಮಠದಲ್ಲಿ ನಿತ್ಯ ಸಾವಿರಾರು ಭಕ್ತರಿಗೆ ನೀಡಲಾಗುತ್ತಿದ್ದ ದಾಸೋಹಕ್ಕೂ ಸಿಲಿಂಡರ್ ಕೊರತೆಯ ಪರಿಣಾಮ ತಟ್ಟಿದೆ. ಸದ್ಯ ಮಠದಲ್ಲಿ ಸೌದೆ ಓಲೆ ಬಳಸಿ ಅಡುಗೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲೂ ಪ್ರಸಾದ ಸಿದ್ಧಪಡಿಸಲು ಸೌದೆ ಓಲೆ ಬಳಸಲಾಗುತ್ತಿದೆ.

ಸಿಲಿಂಡರ್ ಬುಕ್ ಮಾಡುವಾಗ ಸೈಬರ್ ವಂಚಕರ ಬಗ್ಗೆ ಎಚ್ಚರ

ಇದೇ ಸಂದರ್ಭದಲ್ಲಿ ಸೈಬರ್ ವಂಚಕರು ಕೂಡ ಜನರ ಸಂಕಷ್ಟವನ್ನು ದುರುಪಯೋಗಪಡಿಸಿಕೊಳ್ಳಲು ಮುಂದಾಗಿದ್ದಾರೆ. ‘ನಿಮ್ಮ ಹೆಸರಲ್ಲಿ ಗ್ಯಾಸ್ ಬುಕ್ ಆಗಿದೆ’ ಎಂಬಂತೆ ಕಳ್ಳ ಲಿಂಕ್‌ಗಳನ್ನು ಕಳುಹಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ.

ಅಡುಗೆ ಎಣ್ಣೆ ದರವೂ ಏರಿಕೆ

ಇನ್ನೊಂದೆಡೆ ಯುದ್ಧದ ಪರಿಣಾಮವಾಗಿ ಕೇವಲ ಗ್ಯಾಸ್ ಸಿಲಿಂಡರ್ ಆಗಿದೆ, ಅಡುಗೆ ಎಣ್ಣೆಯ ದರವೂ ಏರಿಕೆಯಾಗಿದೆ. 15 ಕೆಜಿ ಟಿನ್‌ಗೆ ಸುಮಾರು 150 ರೂಪಾಯಿ ಮತ್ತು ಲೀಟರ್‌ಗೆ 10 ರಿಂದ 15 ರೂಪಾಯಿವರೆಗೆ ಏರಿಕೆಯಾಗಿದೆ. ಆದರೆ ಮೊಟ್ಟೆಗಳ ರಫ್ತು ಕಡಿಮೆಯಾಗಿರುವ ಕಾರಣ ಅವುಗಳ ಬೆಲೆ ಇಳಿಕೆಯಾಗಿದೆ. ಮೊದಲು 6 ರಿಂದ 7 ರೂಪಾಯಿ ಇದ್ದ ಮೊಟ್ಟೆ ಈಗ 3 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಗ್ಯಾಸ್ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಒಟ್ಟಾರೆ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯ ಪರಿಣಾಮ ರಾಜ್ಯದ ಹೋಟೆಲ್ ಉದ್ಯಮಿಗಳು ಮತ್ತು ಗ್ರಾಹಕರ ಮೇಲೆ ದೊಡ್ಡ ಹೊರೆ ಬಿದ್ದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *