ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. 100ಕ್ಕೂ ಹೆಚ್ಚು ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಮುನ್ನಡೆಸಿದ್ದ ಸರ್ಫರಾಜ್, ತಂಡವನ್ನು ಒಮ್ಮೆ ಐಸಿಸಿ ಟ್ರೋಫಿ ಗೆಲುವಿನತ್ತ ಮುನ್ನಡೆಸಿದ್ದರು. ಕೆಲವು ದಿನಗಳ ಹಿಂದೆ ಪಾಕಿಸ್ತಾನ್ ಅಂಡರ್ 19 ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿರುವ ಸರ್ಫರಾಜ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ವಾಸ್ತವವಾಗಿ ಪಾಕಿಸ್ತಾನ ತಂಡ ಬಹಳ ಸಮಯದಿಂದ ಐಸಿಸಿ ಪ್ರಶಸ್ತಿಗಾಗಿ ಕಾಯುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪಾಕಿಸ್ತಾನ ತಂಡವು ಒಂದೇ ಒಂದು ಐಸಿಸಿ ಪ್ರಶಸ್ತಿಯನ್ನು ಗೆದ್ದಿಲ್ಲ. ಪಾಕ್ ತಂಡ ಕೊನೆಯ ಬಾರಿಗೆ 2017 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು. ಅಂದಿನಿಂದ ಪಾಕಿಸ್ತಾನ ತಂಡಕ್ಕೆ ಒಂದೇ ಒಂದು ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಪಾಕ್ ತಂಡಕ್ಕೆ ಆ ಟ್ರೋಫಿ ಗೆದ್ದುಕೊಟ್ಟಿದ್ದು, ಇದೇ ಸರ್ಫರಾಜ್ ಅಹ್ಮದ್.
38 ವರ್ಷದ ಸರ್ಫರಾಜ್ ಮಾರ್ಚ್ 15 ರಂದು ಭಾನುವಾರದಂದು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕಿಸ್ತಾನ ಪರ ಡಿಸೆಂಬರ್ 2023 ರಲ್ಲಿ ಕೊನೆಯ ಪಂದ್ಯವನ್ನಾಡಿದ್ದ ಸರ್ಫರಾಜ್, ಅಂದಿನಿಂದ ಪಾಕಿಸ್ತಾನ ತಂಡದಿಂದ ಹೊರಗುಳಿದಿದ್ದರು. ಆದಾಗ್ಯೂ, ಕಳೆದ ಕೆಲವು ತಿಂಗಳುಗಳಿಂದ ಅವರು ಪಾಕಿಸ್ತಾನ ಕ್ರಿಕೆಟ್ನಲ್ಲಿ ಮಾರ್ಗದರ್ಶಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಕೆಲವೇ ತಿಂಗಳುಗಳ ಹಿಂದೆ, ಅವರು ಏಷ್ಯಾಕ ರೈಸಿಂಗ್ ಸ್ಟಾರ್ಸ್ನಲ್ಲಿ ಪಾಕಿಸ್ತಾನ ಶಾಹೀನ್ ತಂಡದಲ್ಲಿ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದರು. ಇತ್ತೀಚೆಗೆ, ಅವರು ಅಂಡರ್-19 ರಲ್ಲಿ ಪಾಕಿಸ್ತಾನ ತಂಡಕ್ಕೆ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಸರ್ಫ್ರಾಜ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡ 017 ರಲ್ಲಿ ನಡೆದಿದ್ದ 2 ನೇ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತವನ್ನು ಸೋಲಿಸುವ ಪ್ರಶಸ್ತಿ ಗೆದ್ದಿತು. ಆದರೆ ಪಾಕಿಸ್ತಾನಸ್ ಟ್ರೋಫಿ, ಅಂಡರ್ -19 ನಲ್ಲಿಯೂ ಗೆಲುವಿನತ್ತ ಮುನ್ನಡೆಸಿದರು. 2006 ರಲ್ಲಿ ಅವರ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಫೈನಲ್ನಲ್ಲಿ ಭಾರತವನ್ನು ಸೋಲಿಸಿ ಅಂಡರ್ -19 ಗೆದ್ದಿತ್ತು. ಅಂದಿನಿಂದ ಪಾಕಿಸ್ತಾನ ಅಂಡರ್ -19 ಗೆದ್ದಿಲ್ಲ.




