ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ, ಬಾಗಲಕೋಟೆ ನಗರದಲ್ಲಿ ರಾಜಕೀಯ ನಾಯಕರ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ.ಎಚ್ ವೈ ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆಗಳು ನಡೆಯುತ್ತಿವೆ.

ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿವೆ. ರಾಜಕೀಯ ನಾಯಕರ ಭಾವಚಿತ್ರ, ಸರ್ಕಾರಿ ಜಾಹೀರಾತುಗಳ ನಾಮಫಲಕ, ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿದೆ.

ಬಾಗಲಕೋಟೆ ನಗರಸಭೆ ಸಿಬ್ಬಂದಿ, ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂಭಾಗ ಸೇರಿ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಪಂಚರಾಜ್ಯಗಳ ಚುನಾವಣೆಯೂ ಸೇರಿದಂತೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಗೆಯೇ ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ನಿಧನದಿಂದಾಗಿ ಈ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ನಿಧನದಿಂದ ಈ ಎರಡು ಕ್ಷೇತ್ರಗಳು ತೆರವಾಗಿದ್ದವು.

Source link
ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು