KSRTC bus accident Honnavar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓಮ್ನಿ ಚಾಲಕ ಮೃತಪಟ್ಟಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓಮ್ನಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಮಫಲಕ ಬ್ಯಾನರ್‌ಗಳ ತೆರವು

ಸಿದ್ದಾಪುರ ಮೂಲದ ಇಬ್ರಾಹಿಂ ಮೃತಪಟ್ಟವರಾಗಿದ್ದು, ಇವರು ಭಟ್ಕಳದಿಂದ ಸಿದ್ದಾಪುರದತ್ತ ಓಮ್ನಿ ಚಲಾಯಿಸಿಕೊಂಡು ಹೋಗುತ್ತಿರುವ ವೇಳೆ, ಗೇರುಸೊಪ್ಪದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೆರಂಗಡಿ ಸಮೀಪ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಅಪಘಾತದ ತೀವ್ರತೆಗೆ ಓಮ್ನಿ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಓಮ್ನಿ ಚಾಲಕ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಬದಲು ಈ ಬಾರಿ ಕೇವಲ 2 ಹಂತಗಳಲ್ಲಿ ಮತದಾನ ಏಕೆ?

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೂ ಚಿಕ್ಕಪುಟ್ಟ ಗಾಯಗಳಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು?

Source link
ಹೊನ್ನಾವರ : KSRTC ಬಸ್ – ಓಮ್ನಿ ನಡುವೆ ಭೀಕರ ಅಪಘಾತ: ಓಮ್ನಿ ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವು