
ಬೆಂಗಳೂರು, ಮಾರ್ಚ್ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (ಹವಾಮಾನ ಮುನ್ಸೂಚನೆ) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ, ಈ ಕೆಲವು ದಿನಗಳು ಇಂತಹ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ಇದೆ.
ಎಲ್ಲೆಲ್ಲಿ ತುಂತುರು ಮಳೆ?
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೊಂದಿದೆ. ಅದರೊಂದಿಗೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಎಲ್ಲೆಲ್ಲಿ ಒಣ ಹವೆ?
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ ಎರಡನೇ ವಾರದಲ್ಲಿ ತಾಪಮಾನ
ಮಾರ್ಚ್ ಎರಡನೇ ವಾರದ ನಂತರ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಮತ್ತು ಹೈಡ್ರೇಶನ್ ಅಪಾಯದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಮತ್ತು ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನವನ್ನು ನಿಯಂತ್ರಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಎದುರಾಗುವ ಸೂಚನೆಗಳಿವೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.