
ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿದೆ ಎಂದು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ