Headlines

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು


ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್‌ಗಾಗಿ ಹೈಕಮಾಂಡ್‌ನಲ್ಲಿ ಲಾಭಿ ಶುರುವಾಗಿದೆ

ಬಾಗಲಕೋಟೆ, ಮಾರ್ಚ್ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ನಡುವೆ ಫೈಟ್ ಜೋರಾಗಿದೆ. ಹೈಕಮಾಂಡ್‌ನಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೇಗೌಡರ ಪತ್ರ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿ, ಬಾಗಲಕೋಟೆಯಲ್ಲಿ 25 ವರ್ಷಗಳಿಂದ ಒಂದು ಸಾರಿಯೂ ಈ ವರ್ಗಕ್ಕೆ ಅವಕಾಶ ಕೊಟ್ಟಿಲ್ಲ. ಎದುರಾಳಿ ಅಭ್ಯರ್ಥಿ ಕೂಡ ಕುರುಬ ಸಮುದಾಯದವರೇ ಆಗುವುದು ಫಿಕ್ಸ್ ಆಗಿದೆ. ಕುರುಬ ಸಮುದಾಯದ ಪರವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುವ ನಾನು, 2017ರಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವಾಗ್ವಾದ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ನನ್ನಂತ ಒಬ್ಬ ಕಾರ್ಯಕರ್ತನಿಗೆ ಅವಕಾಶ ಕೊಟ್ಟರೆ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಎಂದು ಅವರು ವಿಶ್ವಾಸವಿರೋದಾಗಿ ಟಿವಿ9ಗೆ ಆಯ್ಕೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *