Headlines

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ


ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರು, ಮಾರ್ಚ್ 16: ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ಇಡಿ ರೈಡ್) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಇಡಿ ಅಧಿಕಾರಿಗಳ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ಸ್ಥಳ.

ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ

1999 ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಮತ್ತು ಇತರ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಸಂಸ್ಥೆ ಕೈಗೊಂಡಿದೆ. ಇದೀಗ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ಸಂಸ್ಥಾಪಕರ ಮನೆ ಮೇಲೂ ದಾಳಿ ನಡೆಸಿದೆ.

ಬೆಳಗ್ಗೆ ದೆಹಲಿ ಕಚೇರಿಯಿಂದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಿಗೆ ಆಗಮಿಸಿ ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ತಂಡ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ ಮಂತ್ರಿ ಡೆವಲಪರ್ಸ್ ನಿರ್ದೇಶಕ ಸುಶೀಲ್ ಮಂತ್ರಿ ಅರೆಸ್ಟ್

ಈ ರೀತಿಯ ಹಣಕಾಸಿನ ಪ್ರಕರಣದಲ್ಲಿ ಇಡಿಯು 2022 ರಲ್ಲಿ ದಾಳಿ ನಡೆಸಿದ್ದು, 2023 ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಗ್ರಾಹಕರಿಂದ ಅಪಾರ್ಟ್ಮೆಂಟ್ಗಾಗಿ ಹಣ ಪಡೆದು ಅದನ್ನು ವಿದೇಶಗಳಲ್ಲಿ ಇರಿಸಿರುವ ಆರೋಪವೂ ಕೇಳಿಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *