Headlines

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಉಜಿರೆಯ ಎಸ್‌ಡಿಎಂ ಕಾಲೇಜಿಗೆ 6 ಚಿನ್ನದ ಪದಕ | Sdm College Ujire Students Win 6 Gold Asian Powerlifting Gvd

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಉಜಿರೆಯ ಎಸ್‌ಡಿಎಂ ಕಾಲೇಜಿಗೆ 6 ಚಿನ್ನದ ಪದಕ | Sdm College Ujire Students Win 6 Gold Asian Powerlifting Gvd



ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಉಜಿರೆಯ ಎಸ್‌ಡಿಎಂ ಕಾಲೇಜಿಗೆ 6 ಚಿನ್ನದ ಪದಕ | Sdm College Ujire Students Win 6 Gold Asian Powerlifting Gvd

ದರ್ಶನ್ ಡಿ ಎಸ್ 60 ಕೆ.ಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಫುಲ್ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ, ಬೆಂಚ್ ಪ್ರೆಸ್ ವಿಭಾಗದಲ್ಲಿ ಚಿನ್ನ, ಸ್ಕ್ವಾಟ್ಸ್ ವಿಭಾಗದಲ್ಲಿ ಚಿನ್ನ ಪಡೆದುಕೊಂಡಿದ್ದಾರೆ.

ಉಜಿರೆ (ಮಾ.16): ಉಜಿರೆಯ‌ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ್ ಡಿ.ಎಸ್ ಮತ್ತು ದೀಕ್ಷಾ ಇತ್ತೀಚೆಗೆ ನವದೆಹಲಿಯ ದೆಹಲಿ ವಿಶ್ವವಿದ್ಯಾಲಯ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ WRPF ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ನ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ 6 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ.

ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ದರ್ಶನ್ ಡಿ ಎಸ್ 60 ಕೆ.ಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಫುಲ್ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ, ಬೆಂಚ್ ಪ್ರೆಸ್ ವಿಭಾಗದಲ್ಲಿ ಚಿನ್ನ, ಸ್ಕ್ವಾಟ್ಸ್ ವಿಭಾಗದಲ್ಲಿ ಚಿನ್ನ ಹಾಗು ಸ್ಟ್ರಿಕ್ಟ್ ಕರ್‌ಲ್ ವಿಭಾಗದಲ್ಲಿ ಚಿನ್ನ ಪಡೆದುಕೊಂಡಿದ್ದಾರೆ. 44 ಕೆಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ ಕಾಲೇಜಿನ ತೃತೀಯ ಬಿಎಸ್ ಸಿ ವಿದ್ಯಾರ್ಥಿನಿ ದೀಕ್ಷಾ ಪಿ., ಫುಲ್ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಡೆಡ್‌ಲಿಫ್ಟ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘ ಆರ್ಥಿಕ ಸಹಾಯದ ಜೊತೆಗೆ ಸಂಪೂರ್ಣ ಸಹಕಾರವನ್ನು ನೀಡಿದೆ.

ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ

ವಿದ್ಯಾರ್ಥಿ ದರ್ಶನ್ ಡಿ.ಎಸ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕ್ಯಾಲಿಸ್ಥೆನಿಕ್ಸ್ ಸ್ಟ್ರೀಟ್ ಲಿಫ್ಟಿಂಗ್ ನ್ಯಾಷನಲ್ಸ್ 2026 ನಲ್ಲಿ ಓಪನ್ ಸ್ಟ್ರೀಟ್ ಲಿಫ್ಟಿಂಗ್ ವಿಭಾಗದಲ್ಲಿ 7ನೇ ಸ್ಥಾನ, ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆರ್ಮ್ ರೆಸ್ಲಿಂಗ್ ಚಾಂಪಿಯನ್‌ಶಿಪ್ ನ 60 ಕೆ.ಜಿ ವಿಭಾಗದಲ್ಲಿ 9ನೇ ಸ್ಥಾನ ಪಡೆದಿದ್ದರು. ಕಳೆದ ಬಾರಿ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದರು. ವಿದ್ಯಾರ್ಥಿನಿ ದೀಕ್ಷಾ ಪಿ. ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದಿದ್ದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಬಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಬಿ ಪೂಂಜ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

‘ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪಠ್ಯೇತರ ಚಟುವಟಿಕೆಗಳಿಗೂ ವಿಶೇಷ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ. ಈಗಾಗಲೇ ನಮ್ಮ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸಾಲಿನಲ್ಲಿ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ್ ಡಿ.ಎಸ್ ಮತ್ತು ದೀಕ್ಷಾ ಪಿ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್‌ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ 6 ಚಿನ್ನದ ಪದಕಗಳನ್ನು ಗೆದ್ದಕೊಂಡು ವಿಶೇಷ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ಹಾಗೂ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಎಸ್.ಡಿ.ಎಂ ಸಂಸ್ಥೆಯ ಪರವಾಗಿ ಶುಭ ಹಾರೈಸುತ್ತೇವೆ.’
– ಡಾ. ಸತೀಶ್ಚಂದ್ರ ಎಸ್, ಕಾರ್ಯದರ್ಶಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ



Source link

Leave a Reply

Your email address will not be published. Required fields are marked *