
Sandur contract employee death: ಬಳ್ಳಾರಿಯ ಸಂಡೂರಿನಲ್ಲಿ ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಮೇಲಾಧಿಕಾರಿಯ ಮಾನಸಿಕ ಕಿರುಕುಳದಿಂದ ನೊಂದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದ ಡೆತ್ನೋಟ್ನಲ್ಲಿ ಅಧಿಕಾರಿ ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಸಾವಿಗೆ ಶರಣಾದ ಗುತ್ತಿಗೆ ನೌಕರ
ಬಳ್ಳಾರಿ : ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಸಾವಿಗೆ ಶರಣಾಗಿದ್ದಾರೆ. ಸಂಡೂರು ತಾಲೂಕಿನ ಗೌರಿಪುರದಲ್ಲಿ ಘಟನೆ ನಡೆದಿದೆ. ಜಿ.ಎನ್. ರಾಜು ನೇಣಿಗೆ ಶರಣಾದ ಗುತ್ತಿಗೆ ನೌಕರರಾಗಿದ್ದು, ಸಂಡೂರು ಕೃಷಿ ಇಲಾಖೆಯ ತಾಲೂಕು (AO) ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್ನೋಟ್ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಅಧಿಕಾರಿ ರಾಘವೇಂದ್ರ ಅವರು ರಾಜು ಅವರಿಗೆ ಕೆಲಸಕ್ಕೆ ಸೇರಿದ ದಿನದಿಂದಲೇ ಮಾನಸಿಕ ಕಿರುಕುಳ ನೀಡುತ್ತಿದ್ರು. ಕಚೇರಿಯಲ್ಲಿನ ಕಿರುಕುಳದ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಅವರ ಮುಂದೆ ಹೇಳಿಕೊಂಡಿದ್ದರು, ದಿನ ನಿತ್ಯ ಕೆಲಸಕ್ಕೆ ಹೋದ್ರು ರಾಘವೇಂದ್ರ ಅವರು ತನ್ನನ್ನು ಮಾತನಾಡಿಸುತ್ತಿರಲಿಲ್ಲ. ಯಾವುದೇ ಕೆಲಸ ಮಾಡು ಅಂತ ಹೇಳುತ್ತಿರಲಿಲ್ಲ ಕಳೆದ ನಾಲ್ಕು ತಿಂಗಳುಗಳಿಂದ ಸಂಬಳ ಸಹ ಬಂದಿರಲಿಲ್ಲವಂತೆ, ಹಿರಿಯ ಅಧಿಕಾರಿಗಳು ಹೇಳಿದ್ರು ನನ್ನ ಗಂಡನಿಗೆ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ರು ಎಂದು ಮೃತ ರಾಜು ಪತ್ನಿ ಪ್ರೇಮಾ ಅವರು ಅರೋಪಿಸಿದ್ದಾರೆ
ಇದನ್ನೂ ಓದಿ: ಎಲ್ಲರನ್ನೂ ಕ್ಷಮಿಸಿಬಿಡು ಇದು ಹೊರಡುವ ಸಮಯ: ಭಾರವಾದ ಹೃದಯದಿಂದ ಹರೀಶ್ ರಾಣಾ ಕಳಿಸಿಕೊಟ್ಟ ಕುಟುಂಬ
ಡೆತ್ ನೋಟ್ ನಲ್ಲಿ ರಾಘವೇಂದ್ರ ಅವರ ಹೆಸರು ಬರೆದು ರಾಜು ಸಾವಿಗೆ ಶರಣಾಗಿದ್ದು, ರಾಘವೇಂದ್ರ ಅವರನ್ನು ಕೆಲಸದಿಂದ ವಜಾ ಮಾಡಬೇಕು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಮೃತ ಪತ್ನಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ವಿಶೇಷ ಮನವಿ:
ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:
Sahai Helpline – 080 2549 7777
ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕಣ್ ಮುಚ್ಚಿ ತೆರೆಯೋಷ್ಟರಲ್ಲಿ ಕಣ್ ಮುಂದೆ ಇದ್ದ ಗ್ಯಾಸ್ ಸಿಲಿಂಡರ್ ನಾಪತ್ತೆ