
ಬಳ್ಳಾರಿ, (ಮಾರ್ಚ್ 16): ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆ (ಕೃಷಿ ಇಲಾಖೆ) ಗುತ್ತಿಗೆ ನೌಕರ ಆತ್ಮಹತ್ಯೆಗೆ (ಆತ್ಮಹತ್ಯೆ) ಶರಣಾಗಿರುವ ಘಟನೆ ಬಳ್ಳಾರಿ (ಬಳ್ಳಾರಿ) ಜಿಲ್ಲೆ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಸಂಡೂರು ಕೃಷಿ ಇಲಾಖೆಯ ತಾಲೂಕು (ಎಒ) ಅಧಿಕಾರಿ ರಾಘವೇಂದ್ರ ಅವರ ವಿರುದ್ಧ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು ಕೃಷಿ ಇಲಾಖೆ ಅಧಿಕಾರಿ ರಾಘವೇಂದ್ರ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಸಂಡೂರು ಕೃಷಿ ಇಲಾಖೆ ಅಧಿಕಾರಿ ರಾಘವೇಂದ್ರ ಅವರು ರಾಜು ಅವರಿಗೆ ಕೆಲಸಕ್ಕೆ ಸೇರಿದ ದಿನದಿಂದಲೇ ಮಾನಸಿಕ ಕಿರುಕುಳ ನೀಡುತ್ತಿದ್ದರು. ಕಚೇರಿಯಲ್ಲಿನ ಕಿರುಕುಳದ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಅವರ ಮುಂದೆ ಹೇಳಿಕೊಂಡಿದ್ದರು, ದಿನ ನಿತ್ಯ ಹೋದ್ರು ರಾಘವೇಂದ್ರ ಅವರು ತನ್ನನ್ನು ಮಾತನಾಡಿಸಿದ್ದರು. ಯಾವುದೇ ಕೆಲಸ ಮಾಡು ಅಂತ ಹೇಳಬೇಕು. ಕಳೆದ ನಾಲ್ಕು ತಿಂಗಳಿನಿಂದ ಸಂಬಳ ಸಹ ಬಂದಿರಲಿಲ್ಲ. ಹಿರಿಯ ಅಧಿಕಾರಿಗಳು ಹೇಳಿದ್ರು ನನ್ನ ಗಂಡನಿಗೆ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು ಎಂದು ಮೃತ ರಾಜು ಪತ್ನಿ ಪ್ರೇಮಾ ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್ ಬರೆದಿಟ್ಟು ಗ್ರಾಪಂ ನೀರುಗಂಟಿ ಆತ್ಮಹತ್ಯೆ
ನೀರುಗಂಟಿ ಆತ್ಮಹತ್ಯೆ
ಚಿಕ್ಕಮಗಳೂರು: ಡೆತ್‌ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆನೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿನಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆತ್‌ನೋಟ್‌ನಲ್ಲಿ ಏನಿದೆ?
ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ. ಫೈನಾನ್ಸ್‌ನಲ್ಲಿ ಸಾಲ ಮಾಡಿದೆ, ಸಂಬಳ ನೀಡಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮೀಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.