ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ: ಎಚ್.ಡಿ.ಕುಮಾರಸ್ವಾಮಿ | Mandya Railway Cooperative Bank Information Centre Hd Kumaraswamy Gvd

ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ: ಎಚ್.ಡಿ.ಕುಮಾರಸ್ವಾಮಿ | Mandya Railway Cooperative Bank Information Centre Hd Kumaraswamy Gvd



ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ: ಎಚ್.ಡಿ.ಕುಮಾರಸ್ವಾಮಿ | Mandya Railway Cooperative Bank Information Centre Hd Kumaraswamy Gvd

ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದ್ದು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕದ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದರು.

ಮಂಡ್ಯ (ಮಾ.16): ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದ್ದು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕದ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದರು. ಅಶೋಕನಗರದಲ್ಲಿ ನೂತನವಾಗಿ ಸ್ಥಾಪಿಸಲಾದ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್‌ನ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸಹಕಾರ ಕ್ಷೇತ್ರವು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರಿಗೆ ಉತ್ತಮ ಬ್ಯಾಂಕಿಂಗ್ ಸೇವೆಗಳನ್ನು ತಲುಪಿಸುವುದು ಇಂದಿನ ದಿನಗಳಲ್ಲಿ ಅವಶ್ಯಕತೆ ಎಂದರು. ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಬಿ.ಮಂಜೇಗೌಡರ ನೇತೃತ್ವದಲ್ಲಿ ಆಡಳಿತ ಮಂಡಳಿಯ ನಿರ್ದೇಶನದಲ್ಲಿ ಬ್ಯಾಂಕ್ ಅನ್ನು ಅತ್ಯುತ್ತಮವನ್ನು ನಿರ್ವಹಿಸುತ್ತಿದ್ದಾರೆ, ಬ್ಯಾಂಕಿನಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವು 8.75 % ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಹೆಚ್ಚಾಗಿ ಬಡ್ಡಿದರವನ್ನು ನೀಡುತ್ತಿದೆ ಎಂದರು.

ಜನಸಾಮಾನ್ಯರಿಗೆ, ಸದಸ್ಯರಿಗೆ, ರೈಲ್ವೆ ನೌಕರರಿಗೆ ಮತ್ತು ಗ್ರಾಹಕರಿಗೆ ಆರ್ಥಿಕ ನೆರವು ಮತ್ತು ವಿಶ್ವಾಸಾರ್ಹ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವಲ್ಲಿ ಸಹಕಾರ ಬ್ಯಾಂಕುಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ದಿ ರೈಲ್ವೆ ಕೋ ಅಪರೇಟಿವ್ ಬ್ಯಾಂಕ್ ನಿಯಮಿತ ಹಲವು ವರ್ಷಗಳಿಂದ ತನ್ನ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದರು.

ಬಹಳ ಉಪಯುಕ್ತ

ಈಗ ಮಂಡ್ಯದಲ್ಲಿ ಮಾಹಿತಿ ಕೇಂದ್ರ ಆರಂಭಿಸಿರುವುದು ಜನತೆಗೆ ಹೆಚ್ಚಿನ ಅನುಕೂಲವಾಗಿದೆ. ಬ್ಯಾಂಕಿಂಗ್ ಸೇವೆಗಳನ್ನು ಸುಲಭವಾಗಿ ಪಡೆಯಲು ಇಂತಹ ಶಾಖಾ ಕೇಂದ್ರಗಳು ಬಹಳ ಉಪಯುಕ್ತವಾಗಿವೆ. ಬ್ಯಾಂಕ್ ಈಗಾಗಲೇ 700ಕೋಟಿ ಠೇವಣಿ ಹೊಂದಿದೆ. ಬ್ಯಾಂಕಿನಲ್ಲಿ ಗೃಹಸಾಲವನ್ನು ಸಹ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕೇಂದ್ರ ಸರ್ಕಾರವು ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಹಲವು ಮಹತ್ವದ ಯೋಜನೆ ಜಾರಿಗೆ ತಂದಿದೆ. ಸಹಕಾರ ಬ್ಯಾಂಕ್‌ಗಳೂ ಸಹ ಈ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಈ ನಿಟ್ಟಿನಲ್ಲಿ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ಡಾ.ಎಸ್.ಆನಂದ, ನಿರ್ದೇಶಕರಾದ ಹನುಮಂತ, ಎಂ.ಬಿ.ಯೋಗಾನಂದ, ಎಸ್.ಮುತ್ತುಕುಮಾರ್, ಆರ್.ಚಂದ್ರಶೇಖರ, ಎಂ.ಯತಿರಾಜು, ಸಿ.ರಾಮನಾದನ್, ಸಿ.ಎಚ್.ಮಂಜುನಾಥ, ಸಿ. ಶಿವಶಂಕರ್, ಎಸ್.ಉತ್ತೇಜ್, ಎಸ್.ಶ್ವೇತಾ, ಸಿ.ನಿರ್ಮಲ, ಪಿ.ಚಂದ್ರಶೇಖರ್, ಎನ್.ಎಸ್.ನಂದಕುಮಾರ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ನಾರಾಯಣ, ಜನರಲ್ ಮ್ಯಾನೇಜರ್ ಎಂ.ಸಿ.ಲಕ್ಮೀಪ್ರಸಾದ್, ಎಚ್.ಸಿ. ಸತ್ಯನಾರಾಯಣ, ಸದಸ್ಯರು, ಠೇವಣಿದಾರರು ಹಾಗೂ ಬ್ಯಾಂಕ್‌ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



Source link

Leave a Reply

Your email address will not be published. Required fields are marked *