
ಬೆಂಗಳೂರು, (ಮಾರ್ಚ್ 16): ಕರ್ನಾಟಕ ವಿಧಾನಸಭೆ ಅಧಿವೇಶನ (ಕರ್ನಾಟಕ ವಿಧಾನಸಭೆ ಅಧಿವೇಶನ 2026) ಇಂದು (ಮಾರ್ಚ್ 16) ಅಚ್ಚರಿಯ ಘಟನೆಗೆ ಸಾಕ್ಷಿಯಾಯ್ತು. ಸದನದಲ್ಲಿ ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ಕೊಡುತ್ತಿಲ್ಲ ಎಂದು ಸಿಟ್ಟಾದ ಸ್ಪೀಕರ್ ಯು.ಟಿ.ಖಾದರ್ (ಯು.ಟಿ. ಖಾದರ್) ಸಭಾತ್ಯಾಗ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಜೆಟ್ ಕಲಾಪದ (ಬಜೆಟ್ ಅಧಿವೇಶನ) 7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು. ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಇದರ ಬೆನ್ನಲ್ಲೇ ಸ್ಪೀಕರ್ ಹಾಗೂ ಸಿಟ್ಟಿಗೆ ಹೆಚ್ಚುವರಿ, ಅಲ್ಪಸಂಖ್ಯಾತ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಇದೇ ಮೊದಲ ಬಾರಿಗೆ ಕಾರಣ ಕೇಳಿ ಬರೋಬ್ಬರಿ ಎಂಟು ಇಲಾಖೆ ಹಿರಿಯ ಐಎಸ್‌ಎಸ್ ಅಧಿಕಾರಿಗಳು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ, ಯಾವೆಲ್ಲಾ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂಬ ಮಾಹಿತಿ ಟಿವಿ9ಗೆ ಲಭ್ಯವಿರುತ್ತದೆ.
ಯಾವ್ಯಾವ ಇಲಾಖೆಯ ಕಾರ್ಯದರ್ಶಿ ಸೋಟಿಸ್?
ಇನ್ನು ಸ್ಪೀಕರ್ ಅಸಮಧಾನಗೊಂಡು ಎದ್ದು ಹೋಗುವುದಕ್ಕೆ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದು, ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡದ ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 8 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡಲಾಯಿತು ಈ ಕೆಳಗಿನ ಬರೋಬ್ಬರಿ 8 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ.
- ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ- ಆರ್. ವಿನೋತ್ ಪ್ರಿಯಾ
- ವಸತಿ ಇಲಾಖೆ ಕಾರ್ಯದರ್ಶಿ- ಮೋಹನ್ ರಾಜ್ ಕೆ.ಪಿ
- ಸಾರಿಗೆ ಇಲಾಖೆ ಕಾರ್ಯದರ್ಶಿ-ಎನ್.ವಿ ಪ್ರಸಾದ್
- ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ- ಆರ್.ಗೀರೀಶ್
- ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ-ಅಮಲನ್ ಆದಿತ್ಯ ಬಿಸ್ವಾಸ್
- ಇತರೆ ಇಲಾಖೆ-ರಾಜೇಂದರ್ ಕುಮಾರ್ ಕಟಾರಿಯಾ
ಇದನ್ನೂ ಓದಿ: ಸರ್ಕಾರದ ಧೋರಣೆಗೆ ಸ್ಪೀಕರ್ ಗರಂ: ಕಲಾಪ ನಿಲ್ಲಿಸಿ ಪೀಠದಿಂದ ಎದ್ದು ಹೊರನಡೆದ ಖಾದರ್
ಸರ್ಕಾರಕ್ಕೆ ತೀವ್ರ ಮುಜುಗರ, ಶಾಸಕರ ಹಕ್ಕು, ಸದನದ ಘನತೆಗೆ ಚ್ಯುತಿಯುಂಟು. ಸದನದಲ್ಲಿ ಪಶ್ನೆಗಳಿಗೆ ಏಕೆ ಉತ್ತರ ನೀಡಿಲ್ಲ? ಉತ್ತರದ ಬಗ್ಗೆ ಲಿಖಿತ ಸಮಜಾಯಿಷಿ ನೀಡುವಂತೆ ಸೂಚನೆ ನೀಡಲಾಗಿದೆ.
ಜೊತೆಗೆ ಇಂದೇ ವಿಧಾನ ಸಭೆ ಕಾರ್ಯದರ್ಶಿಗೆ ಉತ್ತರವನ್ನು ಒದಗಿಸುವಂತೆ ಸೂಚಿಸಲಾಗಿದೆ. ಉತ್ತರ ಒದಗಿಸಲಾಗಿದೆ ಇದ್ದರೆ ಶಾಸಕರಿಗೆ ಸಚಿವರ ವಿಳಂಬಕ್ಕೆ ಕಾರಣ ನೀಡಿ ಎಂದು ನೋಟಿಸ್ ಜಾರಿ ಮಾಡಲಾಗಿದೆ.
ಸಚಿವರ ನಡೆಗೆ ಸ್ಫೀಕರ್ ಕೆಂಡಾಮಂಡಲ
ಬಜೆಟ್ ಕಲಾಪದ 7 ನೇ ದಿನವಾದ ಇಂದು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು. ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಸಚಿವರ ಕಾರ್ಯವೈಖರಿಗೆ ಸದನದಲ್ಲೇ ಗರಂ ಆದ ಸ್ಪೀಕರ್, 230ರ ಪ್ರಶ್ನೆಗಳಲ್ಲಿ 84 ಪ್ರಶ್ನೆಗಳಿಗೆ ಮಾತ್ರ ಸಚಿವರು ಉತ್ತರಿಸಿದ್ದಾರೆ. ಈ ಬಗ್ಗೆ ಮೊನ್ನೆಯೇ ಮಂತ್ರಿಗಳು ಮತ್ತು ಸರ್ಕಾರಕ್ಕೆ ಸ್ಪಷ್ಟವಾಗಿ ಹೇಳಲಾಗಿದೆ. ಕಲಾಪ ನಡೆಸುವುದು ಮಂತ್ರಿಗಳಿಗೆ ಅಲ್ಲ, ಶಾಸಕರ ಸಮಸ್ಯೆಗಳಿಗೆ. ಎಲ್ಲಾ ಪಕ್ಷಗಳ ಶಾಸಕರೂ ಪ್ರಶ್ನೆಗಳನ್ನು ಕೇಳುತ್ತಾರೆ. ನಿಯಮಾವಳಿ ಪ್ರಕಾರ ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಲಿಲ್ಲ ಅಂದ್ರೆ ಹೇಗೆ? ಹಾಗಾದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು ಹೇಳಿ? ಸರಿಯಾದ ಸಮಯಕ್ಕೆ ಮಂತ್ರಿಗಳು ಬರುವುದಿಲ್ಲ. ಹಿಂದೆಯೂ ಈ ಬಗ್ಗೆ ಸೂಚನೆ ನೀಡಿದ್ದೇನೆ. ನಾಲ್ಕು ಭಾರಿ ಸೂಚನೆ ನೀಡಿದ್ದೇನೆ. ಇಂದು ಸೇರಿ ಐದನೇ ಬಾರಿಯೂ ಸುಧಾರಿಸದಿದ್ದರೆ ಏನು ಮಾಡುವುದು? ಸುಧಾರಣೆ ಕಾಣಲೇ ಇಲ್ಲ. ಹೀಗಾದರೆ ಸದನ ನಡೆಸುವುದು ಹೇಗೆ? ಯಾವುದೇ ಸಚಿವರು ಬಂದು ಉತ್ತರ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದೆಂದೂ ಸ್ಪೀಕರ್ ಖಾದರ್ ಪೀಠದಿಂದ ಎದ್ದು ಹೋಗಿದ್ದರು.
ಸ್ಪೀಕರ್ ಸಿಟ್ಟಿಗೆ ಹಿರಿಯ ಅಧಿಕಾರಿಗಳು ತಲೆದಂಡ
ವಿಧಾನ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನವನ್ನು ಮುಂದೂಡದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.