Headlines

ಋತುಚಕ್ರದ ರಜೆ ನೀಡುವ ಅಧಿಸೂಚನೆ; ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಮೌಖಿಕ ಸೂಚನೆ | Notification For Granting Menstrual Leave High Court Issues Verbal Instruction Not To Issue Show Cause Notice Mrq

ಋತುಚಕ್ರದ ರಜೆ ನೀಡುವ ಅಧಿಸೂಚನೆ; ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಮೌಖಿಕ ಸೂಚನೆ | Notification For Granting Menstrual Leave High Court Issues Verbal Instruction Not To Issue Show Cause Notice Mrq



ಋತುಚಕ್ರದ ರಜೆ ನೀಡುವ ಅಧಿಸೂಚನೆ; ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಮೌಖಿಕ ಸೂಚನೆ | Notification For Granting Menstrual Leave High Court Issues Verbal Instruction Not To Issue Show Cause Notice Mrq

ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡುವ ಸರ್ಕಾರದ ಅಧಿಸೂಚನೆಗೆ ಸಂಬಂಧಿಸಿದಂತೆ, ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡದಂತೆ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದೆ. 

ಬೆಂಗಳೂರು: ರಾಜ್ಯದಲ್ಲಿನ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಒಂದು ದಿನದ ವೇತನ ಸಹಿತ ರಜೆ ನೀಡುವ ಆದೇಶ ಜಾರಿಗೊಳಿಸುವ ಸಂಬಂಧ ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿದೆ. 

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ನೀತಿ ಜಾರಿಗೊಳಿಸಿ ರಾಜ್ಯ ಕಾರ್ಮಿಕ ಇಲಾಖೆ 2025ರ ನ.20ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿರುವ ಅರ್ಜಿ, ಸೋಮವಾರ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಋತುಚಕ್ರದ ರಜೆ ನೀತಿ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಋತುಚಕ್ರದ ರಜೆ ನೀತಿ ಹೋಟೆಲ್‌ ಉದ್ಯಮದಾರರ ಹಿತಾಸಕ್ತಿಗೆ ವಿರುದ್ಧವಾಗಿದೆ. ಅಧಿಸೂಚನೆಯ ಮುಂದುವರಿದ ಭಾಗವಾಗಿ ಸರ್ಕಾರ ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡುತ್ತಿರುವುದರಿಂದ ತೀವ್ರ ಸಮಸ್ಯೆಯಾಗುತ್ತಿದೆ. ಮಹಿಳೆಯರಿಗೆ ರಕ್ಷಣೆ ನೀಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲ. ಆದರೆ, ಉದ್ಯಮದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಳ್ಳದೇ ಅಧಿಸೂಚನೆ ಜಾರಿಗೊಳಿಸಲು ಮುಂದಾಗಿದೆ. ಕೆಲಸಗಾರರು ಮತ್ತು ಉದ್ಯೋಗದಾತರ ನಡುವೆ ಸಮಾನತೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಬೆಂಗಳೂರು ಮಹಿಳಾ ವಕೀಲರ ಪರ ವಕಿಲರು, ಅಧಿಸೂಚನೆಯಲ್ಲಿ ಉದ್ಯೋಗದಾತರಿಗೆ ಸಮಸ್ಯೆಯಾಗುವಂತಹ ಯಾವುದೇ ಅಂಶಗಳಿಲ್ಲ. ಮಾಹಿತಿಯ ಪ್ರಕಾರ ಯಾವುದೇ ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ಜಾರಿಯಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನೂ ಓದಿ: Santosh Lad Interview: ಸಂತೋಷ್‌ ಲಾಡ್‌ ಸಂದರ್ಶನ: ಶ್ರಮಯೋಗಿಗಳ ಕಲ್ಯಾಣಕ್ಕೆ ಸರ್ಕಾರದ ಆದ್ಯತೆ

ಶೋಕಾಸ್‌ ನೋಟಿಸ್‌

ವಾದ-ಪ್ರತಿವಾದ ಆಲಿಸಿದ ಪೀಠ, ಪ್ರಕರಣ ವಿಚಾರಣೆ ಹಂತದಲ್ಲಿದೆ. ಅರ್ಜಿಯ ಸಂಬಂಧ ವಾದ ಮಂಡಿಸಲು ಸರ್ಕಾರ ಮುಂದಾಗುತ್ತಿಲ್ಲ. ಬದಲಿಗೆ ವಿಚಾರಣೆ ಮುಂದೂಡಿಕೆ ಕೋರುತ್ತದೆ. ಇನ್ನೊಂದೆಡೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ. ಹಾಗಾಗಿ, ಶೋಕಾಸ್‌ ನೋಟಿಸ್‌ಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ಹೇಳಿತಲ್ಲದೆ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳಬಾರದು. ಶೋಕಾಸ್ ನೋಟಿಸ್‌ ನೀಡಬಾರದು ಎಂದು ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ: ಸರ್ಕಾರದ ಮಹತ್ವದ ಆದೇಶ



Source link

Leave a Reply

Your email address will not be published. Required fields are marked *