Headlines

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು


ಚಾಮರಾಜನಗರ: ವಿದ್ಯುತ್ ಶಾಕ್ ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂಡು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (ಹುಲಿ) ವಿದ್ಯುತ್ ಶಾಕ್ ಗೆ ಬಲಿಯಾಗಿರುವಂತಹ (ಸಾವು) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ದಿಢೀರನೆ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಬಿಡಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್ ಹಾಕಿದ ಅನ್ನದಾತರು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಜಮೀನು ಒಂದಕ್ಕೆ ವಿದ್ಯುತ್ ನೀಡಿದ್ದ ಸಂಪರ್ಕದಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಸಾವನ್ನಪ್ಪಿದೆ. ಈ ಹಿನ್ನಲೆ ಸ್ಥಳಕ್ಕೆ ಬಂದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಗೆ ಘೇರಾವ್ ಹಾಕಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಹುಲಿ ಸಾವು ಪ್ರಕರಣ: ಉರುಳು ಹಾಕಿದ್ದ ಆರೋಪಿ ಬಂಧನ

ಇನ್ನು ಕಳೆದ 15 ದಿನಗಳಲ್ಲಿ ರವಿಚಂದ್ರ ಎಂಬುವವರ ಜಮೀನಿನಲ್ಲಿ ಮೇಯುತ್ತಿದ್ದ ಮೂರು ಜನರಿಂದ ವ್ಯಾಘ್ರ ದಾಳಿ ನಡೆದಿತ್ತು. ಮೂರು ಹಸುವನ್ನ ಕೊಂಡು ತಿಂದು ತೇಗಿತ್ತು. ಆಗ ಬಂಡೀಪುರ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಾರದೆ ಉಡಾಫೆ ತೋರಿದ್ದರು. ಆದರೆ ಇಂದು ಹುಲಿ ಸತ್ತ ವಿಚಾರ ತಿಳಿದ ತಕ್ಷಣ ಇಡೀ ಬಂಡೀಪುರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇದರಿಂದ ರೊಚ್ಚಿಗೆದ್ದ ರೈತ ವರ್ಗ ಅರಣ್ಯ ಸಿಬ್ಬಂದಿಗೆ ಘೇರಾವ್ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹುಲಿಯ ಕಾಟಕ್ಕೆ ಈ ಭಾಗದ ರೈತರು ರೋಸಿಹೋಗಿದ್ದಾರೆ. ಆಗಲೇ ಅರಣ್ಯ ಸಿಬ್ಬಂದಿ ಬೋನಿಟ್ಟು ಹುಲಿಯನ್ನ ಹಿಡಿದಿದ್ದಾರೆ ಇಂದು ಹುಲಿ ಬಲಿಯಾಗಿದ್ದರು ಎಂದು ರೈತ ದಿನೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ

ವಿದ್ಯುತ್ ನೀಡಿ ಹುಲಿ ಸಾವಿಗೆ ಕಾರಣವಾದವರ ಮೇಲೆ ಎಫ್ ಐಆರ್ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಆದರೆ ಕರ್ತವ್ಯ ಲೋಪ ಎಸಗಿದ ಅರಣ್ಯ ಇಲಾಖೆ ಸಿಎಫ್ ಪ್ರಭಾಕರನ್ ಮೇಲೆ ಎಫ್ ಐ ಆರ್ ಮಾಡಿದರೆ ಮಾತ್ರ ರೈತರ ಮೇಲೆ ಎಫ್ ಐಆರ್ ಮಾಡಬೇಕು. ಇಲ್ಲದೆ ಹೋದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡುವುದಕ್ಕೆ ಬಿಡಲ್ಲವೆಂದು ರೈತರು ಪಟ್ಟು ಹಿಡಿದರು. ರೈತರ ಉಗ್ರ ರೂಪಕ್ಕೆ ಬೆದರಿದ ಬಂಡೀಪುರ ಸಿಎಫ್ ಪ್ರಭಾಕರನ್, ಪೊಲೀಸ್ ರಕ್ಷಣೆ ಸ್ಥಳಕ್ಕೆ ಬಂದಿದ್ದು ಹಾಸ್ಯಾಸ್ಪದವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *