
ಬೆಂಗಳೂರು, ಮಾ.18: ಕರ್ನಾಟಕದಾದ್ಯಂತ ಇಂದು ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ 32°C ಮತ್ತು ಕನಿಷ್ಠ 19°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಹಗುರವಾದ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ (ಬೀದರ್, ಕಲಬುರಗಿ, ರಾಯಚೂರು ಇತ್ಯಾದಿ) ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 37°C ಆಸುಪಾಸಿನಲ್ಲಿರಬಹುದು. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೊಂದಿದೆ.
ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುತ್ತಾರೆ
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಲೆನಾಡು ಭಾಗದಲ್ಲಿ ಕವಿದ ವಾತಾವರಣವಿದ್ದು, ತಾಪಮಾನವು ಇತರ ಜಿಲ್ಲೆಗಳಿಂದ ಕಡಿಮೆ ಇರಲಿದೆ. ಹಾವೇರಿ ಮತ್ತು ಚಿತ್ರದುರ್ಗ ಭಾಗಗಳಲ್ಲಿ ಹಗಲು ಬಿಸಿಲು ತೀವ್ರವಾಗಿರುತ್ತದೆ, ಸಂಜೆಯ ಹೊತ್ತಿಗೆ ಆಕಾಶ ಮೋಡದಿಂದ ಕೂಡಿರುತ್ತದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ