
ಬೆಂಗಳೂರು, ನವದೆಹಲಿ, ಮಾರ್ಚ್ 18: ಇರಾನ್-ಇಸ್ರೇಲ್, ಮಧ್ಯಪ್ರಾಚ್ಯ ಸಂಘರ್ಷ ಭಾರತದಲ್ಲಿ ಸೇರಿದಂತೆ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ತೀವ್ರತರದ ಅಭಾವಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿಯು ಹೋಟೆಲ್ ತೊಂದರೆಯನ್ನು ದಿಕ್ಕೆಡಿಸಿದೆ, ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆಯಿಂದ ತೀವ್ರವಾಗಿ ಅನುಭವಿಸುತ್ತಿದೆ. ಈ ಬಿಕ್ಕಟ್ಟನ್ನು ದುರ್ಬಳಕೆ ಮಾಡಿಕೊಂಡ ಕೆಲ ಖದೀಮರು ಗೃಹಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಅಕ್ರಮಗಳ ವಿರುದ್ಧ ದೇಶಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ, ದೆಹಲಿ, ಸೇರಿದಂತೆ ಕಾಶ್ಮೀರ, ಕೇರಳ 12 ಸಾವಿರಕ್ಕೂ ಹೆಚ್ಚು ದಾಳಿ. ಈ ದಾಳಿಗಳಲ್ಲಿ ಸುಮಾರು 15 ಸಾವಿರ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ 600 ಸಿಲಿಂಡರ್‌ಗಳು, ಉತ್ತರ ಪ್ರದೇಶದಲ್ಲಿ 405 ತಪಾಸಣೆಗಳು ನಡೆದಿವೆ ಹಾಗೂ 10 ಜನರನ್ನು ಬಂಧಿಸಲಾಗಿದೆ. ಕಾಶ್ಮೀರದಲ್ಲಿ 504 ದಾಳಿ ನಡೆಸಿ ಎಫ್‌ಐಆರ್ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ಬೀದರ್‌ನಲ್ಲಿ 105, ದಾವಣಗೆರೆ ಮತ್ತು ಯಾದಗಿರಿಯಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಏತನ್ಮಧ್ಯೆ, ಕಮರ್ಷಿಯಲ್ ಗ್ಯಾಸ್ ಬಿಕ್ಕಟ್ಟು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸಮರ್ಪಕ ಗ್ಯಾಸ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ