ಸಿಎಂ ಇದ್ದಾಗಲೇ ಸ್ಪೀಕರ್‌ ಸಭಾತ್ಯಾಗ, ಇದು ಆಡಳಿತ ಅಸಮರ್ಥತೆಗೆ ಸಾಕ್ಷಿ: ಜೋಶಿ | Pralhad Joshi Slams Karnataka Govt Over Speaker S Walkout Sign Of Incompetence

ಸಿಎಂ ಇದ್ದಾಗಲೇ ಸ್ಪೀಕರ್‌ ಸಭಾತ್ಯಾಗ, ಇದು ಆಡಳಿತ ಅಸಮರ್ಥತೆಗೆ ಸಾಕ್ಷಿ: ಜೋಶಿ | Pralhad Joshi Slams Karnataka Govt Over Speaker S Walkout Sign Of Incompetence



ಸಿಎಂ ಇದ್ದಾಗಲೇ ಸ್ಪೀಕರ್‌ ಸಭಾತ್ಯಾಗ, ಇದು ಆಡಳಿತ ಅಸಮರ್ಥತೆಗೆ ಸಾಕ್ಷಿ: ಜೋಶಿ | Pralhad Joshi Slams Karnataka Govt Over Speaker S Walkout Sign Of Incompetence

ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನದಿಂದ ಹೊರನಡೆದ ಘಟನೆಯನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಟೀಕಿಸಿದ್ದಾರೆ. ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದಿರುವುದು, ಗೈರುಹಾಜರಾಗುವುದು ಸರ್ಕಾರದ ಅಧೋಗತಿಗೆ ಸಾಕ್ಷಿ ಎಂದರು.

ಬೆಂಗಳೂರು (ಮಾ.18): ರಾಜ್ಯ ಕಾಂಗ್ರೆಸ್ ಸರ್ಕಾರ ಆಗಾಗ ತನ್ನ ಆಡಳಿತ ವೈಫಲ್ಯ ಪ್ರದರ್ಶಿಸುತ್ತಲೇ ಇದ್ದು, ಇದೀಗ ಖುದ್ದು ವಿಧಾನಸಭೆ ಸ್ಪೀಕರ್ ಅವರೇ ಸಿಟ್ಟಿಗೆದ್ದು ಸದನದಿಂದ ಹೊರ ನಡೆದು ಆಡಳಿತದ ಅಸಮರ್ಥತೆಯನ್ನು ಮತ್ತೊಮ್ಮೆ ತೆರೆದಿಟ್ಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದ ಹಾಗೂ ಕೆಲ ಸಚಿವರು ಗೈರು ಇರುವುದನ್ನು ಕಂಡು ಸ್ಪೀಕರ್ ಯು.ಟಿ.ಖಾದರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆದುರೇ ಸಭಾತ್ಯಾಗ ಮಾಡಿರುವುದು ಈ ಸರ್ಕಾರದ ಅಧೋಗತಿಗೆ ಹಿಡಿದ ಕೈಗನ್ನಡಿ ಎಂದು ತಿಳಿಸಿದರು.

ಸದನದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಅನೇಕ ಸಚಿವರು ವಿಫಲರಾಗಿದ್ದಾರೆ ಎಂದರೆ ರಾಜ್ಯ ಸರ್ಕಾರದ ಕಾರ್ಯ ವೈಖರಿ ನಿಜಕ್ಕೂ ಶೋಚನೀಯ. ಮುಖ್ಯಮಂತ್ರಿಗಳಿಗೆ ಸಚಿವರು ಮತ್ತು ಆಡಳಿತದ ಮೇಲೆ ಹಿಡಿತವೇ ಇಲ್ಲ ಎನ್ನಬೇಕಾಗುತ್ತದೆ ಎಂದರು.

ಪ್ರವಾಸವೇ ಮುಖ್ಯ:

ರಾಜ್ಯದ ಸಚಿವರು ಬಜೆಟ್ ಕಲಾಪದಲ್ಲೂ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲಾರದ ಸ್ಥಿತಿ ತಲುಪಿದ್ದಾರೆ. ಅಲ್ಲದೆ, ಸಕಾಲಕ್ಕೆ ಆಧಿವೇಶನಕ್ಕೆ ಹಾಜರಾಗುವುದೂ ಇಲ್ಲ ಎಂದರೆ ಇವರಿಗೆ ಆಡಳಿತದ ಮೇಲೆ ಆಸಕ್ತಿಯೇ ಇಲ್ಲ. ಬಹುಶಃ ಸರ್ಕಾರ ನಡೆಸುವುದರ ಬಗೆಗೆ ನಿರಾಸಕ್ತಿ ಇದ್ದಂತಿದೆ ಎಂದು ಲೇವಡಿ ಮಾಡಿದರು.

ಪ್ರಸ್ತುತದಲ್ಲಿ ಕೆಲ ಸಚಿವರು, ಶಾಸಕರುಗಳು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿಯೇ ಹೆಚ್ಚು ಸಕ್ರಿಯರಾದಂತೆ ಕಾಣುತ್ತದೆ. ಇವರಿಗೆ ರಾಜ್ಯದ ಜನರ ಹಿತ, ರಾಜ್ಯದ ಅಭಿವೃದ್ಧಿಗಿಂತ ಗುಂಪುಗಾರಿಕೆ, ದೆಹಲಿ ಮತ್ತು ವಿದೇಶಿ ಪ್ರವಾಸವೇ ಪ್ರಮುಖವಾದಂತಿದೆ. ಎಲ್ಲಿ ಬೇಕಲ್ಲಿ ಪ್ರವಾಸಕ್ಕೆ ಸಮಯವಿರುವ ಮಂತ್ರಿಗಳಿಗೆ ಸದನಕ್ಕೆ ಬರಲು ಸಮಯ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.



Source link

Leave a Reply

Your email address will not be published. Required fields are marked *