Headlines

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ


BOB ಕ್ಯಾಪಿಟಲ್ ಮಾರುಕಟ್ಟೆಗಳು: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಯೋಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 10 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ3 ಅರ್ಜಿ ಆಹ್ವಾನ, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿ ವಲಯದ ಉತ್ತರ ವಲಯಕ್ಕೆ 3, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವಕ್ಕೆ ಒಟ್ಟು 22 ಹುದ್ದೆಗಳನ್ನು ಮೀಸಲಿಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಶಿಕ್ಷಣವನ್ನು ಪೂರೈಸಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ ಬಂಡವಾಳ ಕನಿಷ್ಠ 6 ತಿಂಗಳ ಅನುಭವವಿರುವುದು ಕಡ್ಡಾಯವಾಗಿದೆ. ಅದರಲ್ಲೂ ವಿಶೇಷವಾಗಿ ಡಿಮ್ಯಾಟ್ ಖಾತೆ ನಿರ್ವಹಣೆ, ಟ್ರೇಡಿಂಗ್ ಅಕೌಂಟ್ ಮತ್ತು ಸೇಲ್ಸ್ ಬ್ರೋಕಿಂಗ್ ವಿಭಾಗದಲ್ಲಿ ಪರಿಣತಿ ಹೊಂದಿರುವವರಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳ ಉತ್ತಮ ಸಂವಹನ ಕೌಶಲ್ಯ, ಮಾರ್ಕೆಟಿಂಗ್ ಜ್ಞಾನ ಮತ್ತು ಗ್ರಾಹಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಕೌಶಲ್ಯವನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ; ಪದವೀಧರರಿಗೆ ಸುವರ್ಣವಕಾಶ

ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳ ವಿವಿಧ ಶಾಖೆಗಳಲ್ಲಿ ಪೂರ್ಣ ಅವಧಿಯ ಕೆಲಸ ನಿರ್ವಹಿಸುತ್ತಾರೆ. ಆಸಕ್ತರು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ತಮ್ಮ ವಿವರವಾದ ರೆಸ್ಯೂಮೆಯನ್ನು careers@bobcaps.in ಇಮೇಲ್ ಕಳುಹಿಸಬೇಕು. ಇಮೇಲ್ ಕಳುಹಿಸುವಾಗ ಸಬ್ಜೆಕ್ಟ್ ಲೈನ್‌ನಲ್ಲಿ “ವ್ಯಾಪಾರ ಅಭಿವೃದ್ಧಿ ವ್ಯವಸ್ಥಾಪಕರ ಅರ್ಜಿ (ಆಫ್-ರೋಲ್)” ಎಂದು ನಮೂದಿಸುವುದು ಕಡ್ಡಾಯವಾಗಿದೆ.

ನೇಮಕಾತಿಯ ಬಗೆಗಿನ ಹೆಚ್ಚಿನ ವಿವರ ಮತ್ತು ಅಧಿಸೂಚನೆಯನ್ನು ಓದಲು ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡಿ: bobcaps.in/careers#jobopenings

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *