Sugarcane Farmers: ವಿದ್ಯುತ್ ಖರೀದಿಗೆ ಸಕ್ಕರೆ ಕಾರ್ಖಾನೆಗಳ ಜೊತೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ | Sugar Factory Power Purchase Agreement Shivanand Patil Statement Gvd

Sugarcane Farmers: ವಿದ್ಯುತ್ ಖರೀದಿಗೆ ಸಕ್ಕರೆ ಕಾರ್ಖಾನೆಗಳ ಜೊತೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ | Sugar Factory Power Purchase Agreement Shivanand Patil Statement Gvd



Sugarcane Farmers: ವಿದ್ಯುತ್ ಖರೀದಿಗೆ ಸಕ್ಕರೆ ಕಾರ್ಖಾನೆಗಳ ಜೊತೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ | Sugar Factory Power Purchase Agreement Shivanand Patil Statement Gvd

ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಜಯಪುರ (ಮಾ.18): ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಪರಿಷತ್ತಿನಲ್ಲಿ ಮಂಗಳವಾರ ರವಿಕುಮಾರ ಹಾಗೂ ಇತರ ಸದಸ್ಯರು ನಿಯಮ 330ರ ಅಡಿಯಲ್ಲಿ ನೀಡಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಸಕ್ಕರೆಯ ಎಂಎಸ್‌ಪಿ ದರ ಹೆಚ್ಚಳ ಮಾಡಿದರೆ ಸಕ್ಕರೆ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚೆ ಮಾಡಲಾಗಿದೆ.

ಸಕ್ಕರೆ ಕಾರ್ಖಾನೆಗಳ ಮಾಲೀಕರ ಬೇಡಿಕೆಗಳಲ್ಲಿ ಎರಡು ಬೇಡಿಕೆಗಳು ಮಾತ್ರ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರಲಿವೆ. ವಿದ್ಯುತ್‌ ಖರೀದಿ ಒಪ್ಪಂದ ಮತ್ತು ನೀರಿನ ತೆರಿಗೆ ಬೇಡಿಕೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡಲು ಅವಕಾಶ ನೀಡಬೇಕು. ಎಥೆನಾಲ್‌ ದರ ಪರಿಷ್ಕರಣೆ ಹಾಗೂ ಉತ್ಪಾದನಾ ಪ್ರಮಾಣಕ್ಕೆ ಅನುಗುಣವಾಗಿ ಹಂಚಿಮೆ ಮಾಡಬೇಕು.

ಗ್ರಾಹಕರಿಗೂ ಅನುಕೂಲ

ಈ ಬೇಡಿಕೆಗಳಿಗೆ ಕೇಂದ್ರ ಸ್ಪಂದಿಸಿದರೆ ಕಬ್ಬು ಬೆಳೆಗಾರರ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಕ್ಕರೆಗೆ ಎಲ್‌ಪಿಜಿ ರೀತಿ ಗೃಹ ಬಳಕೆಗೆ ಬೇರೆ ಹಾಗೂ ವಾಣಿಜ್ಯ ಬಳಕೆಗೆ ಬೇರೆ ದರ ನಿಗದಿಪಡಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿದರೆ ಗ್ರಾಹಕರಿಗೂ ಅನುಕೂಲ, ಕಬ್ಬು ಬೆಳೆಗಾರರ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದರು.

ರಾಜ್ಯದಲ್ಲಿ ಸತತ ಎರಡು ವರ್ಷ ಕಬ್ಬು ಬೆಳೆಗಾರರಿಗೆ ಪೂರ್ಣ ಪ್ರಮಾಣದಲ್ಲ ಹಣ ಪಾವತಿ ಮಾಡಲಾಗಿದೆ. ಈ ವರ್ಷ ಇನ್ನೂ ಕ್ರಷಿಂಗ್‌ ನಡೆದಿದ್ದು, ಈ ಬಾರಿಯೂ ಪೂರ್ಣ ಪ್ರಮಾಣದಲ್ಲಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಅತಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂರು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಕಬ್ಬಿನ ಬಿಲ್‌ ಪಾವತಿ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಇನ್ನೂ ರೈತರ ಕಬ್ಬಿನ ಬಿಲ್‌ ಬಾಕಿ ಇದೆ ಎಂದು ಸಚಿವರು ವಿಧಾನಪರಿಷತ್ತಿಗೆ ತಿಳಿಸಿದರು.



Source link

Leave a Reply

Your email address will not be published. Required fields are marked *