ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು, ಮಾರ್ಚ್ 18: ಕೋಗಿಲು ನಿರಾಶ್ರಿತರಿಗೆ ಕೊನೆಗೂ ನಿವೇಶನ ಭಾಗ್ಯ ದೊರೆತಿದೆ. ಮೂರ್ನಾಲ್ಕು ತಿಂಗಳ ಬಳಿಕ 30 ಅರ್ಹ ನಿವಾಸಿಗಳಿಗೆ ಸಚಿವರಾದ ಕೃಷ್ಣಬೈರೇಗೌಡ ಮತ್ತು ಜಮೀರ್ ಅಹ್ಮದ್ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆ ಮೂಲಕ ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹಕ್ಕುಪತ್ರ ಪಡೆದವರಲ್ಲಿ ಸಾಮಾನ್ಯ ವರ್ಗದ 10 ಕುಟುಂಬಗಳಿಗೆ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿಯ 7 ಕುಟುಂಬ, ಪರಿಶಿಷ್ಟ ಪಂಗಡದ 2 ಕುಟುಂಬ, ಅಲ್ಪಸಂಖ್ಯಾತ ಸಮುದಾಯದ 10 ಕುಟುಂಬಗಳು ಸೇರಿದಂತೆ ಒಟ್ಟು 30 ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *