IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ


IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಲಾಗಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಅಲಭ್ಯವಾಗಿದೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್‌ಗೆ ವಹಿಸಲಾಗಿದೆ.

ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ನಾಯಕತ್ವ ಸಿಗಬಹುದು ಎಂದು ಹೇಳಿದರು. ಆದರೆ ಅದೆಲ್ಲವನ್ನು ಸುಳ್ಳು ಮಾಡಿರುವ ಸನ್‌ರೈಸರ್ಸ್ ಆಡಳಿತ ಮಂಡಳಿ ಇಶಾನ್ ಕಿಶನ್‌ಗೆ ನಾಯಕತ್ವದ ಪಟ್ಟ ಕಟ್ಟಿದೆ.

ಇಶಾನ್ ಕಿಶನ್ ಗೆ ತಂಡದ ನಾಯಕತ್ವ ವಹಿಸುವುದಕ್ಕೂ ಪ್ರಮುಖ ಕಾರಣವಿದೆ. ಅದೇನೆಂದರೆ, ಇತ್ತಿಚಿಗಷ್ಟೆ ಮುಗಿದ ಟಿ20 ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್, ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜೊತೆಗೆ ಅತಿ ಹೆಚ್ಚು ರನ್ ಬಾರಿಸಿದ ಭಾರತದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಹೀಗಾಗಿ ಅವರಿಗೆ ತಂಡದ ನಾಯಕತ್ವ ವಹಿಸಲಾಗಿದೆ.

ಐಪಿಎಲ್‌ನಲ್ಲಿ ಆಡಿದ ಅಪಾರ ಅನುಭವ ಹೊಂದಿರುವ ಇಶಾನ್ ಕಿಶನ್ ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಒಂದೆಡೆ ಕಿಶನ್‌ಗೆ ತಂಡದ ನಾಯಕತ್ವವಹಿಸಿರುವ ಫ್ರಾಂಚೈಸಿ, ಅಭಿಷೇಕ್ ಶರ್ಮಾಗೆ ಉಪನಾಯಕನ ಜವಾಬ್ದಾರಿ ನೀಡಿದೆ. ಈ ಇಬ್ಬರು ಯುವ ಆಟಗಾರರ ಸಾರಥ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಯಾವ ರೀತಿಯ ಪ್ರದರ್ಶನವನ್ನು ಹೊಂದಿದೆ.



Source link

Leave a Reply

Your email address will not be published. Required fields are marked *