ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ


ಲೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಬೆಂಗಳೂರು, ಮಾರ್ಚ್ 18: ಐದು ನಗರ ಪಾಲಿಕೆಗಳ ವಾರ್ಡ್‌ವಾರು ಮತದಾರರ ತಾತ್ಕಾಲಿಕ ಪಟ್ಟಿಯನ್ನು ಪರಿಷ್ಕರಿಸುವ ಪ್ರಕ್ರಿಯೆಯಲ್ಲಿ ನಾಗರಿಕರಿಗೆ ದೂರು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಇದೀಗ ಮುಂದೂಡಲಾಗಿದೆ. ಜನರು ತಮ್ಮ ಅಸಮ್ಮತಿ ಅಥವಾ ತಿದ್ದುಪಡಿ ಸಲಹೆಗಳನ್ನು ಮಾರ್ಚ್ 30 ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಈ ಮೊದಲು ಮಾರ್ಚ್ 20ರವರೆಗೆ ಮಾತ್ರ ಕಾಲಾವಕಾಶ ನಿಗದಿಯಾಗಿತ್ತು. ಆದರೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಹೆಚ್ಚಿನ ಸಮಯವನ್ನು ನೀಡುವಂತೆ ಒತ್ತಾಯಿಸಿದರು. ಈ ಸಂಬಂಧಿತ ಅಧಿಕಾರಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ಅವಧಿ ವಿಸ್ತರಣೆಗಾಗಿ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಪರಿಶೀಲಿಸಿದ ಆಯೋಗವು ಜನಸಾಮಾನ್ಯರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ.

ಮಾಧ್ಯಮ ಪ್ರಕಟಣೆಯಲ್ಲೇನಿದೆ?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವಾರ್ಡುವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯು ಮಾರ್ಚ್ 09 ರಂದು ಪ್ರಕಟಿಸಲಾಗಿದೆ. ಆದರೆ ಅದೇ ದಿನ ನಡೆದ ಸಭೆಯಲ್ಲಿ ರಾಜಕೀಯ ಪಕ್ಷಗಳ ಮತದಾರರ ಪಟ್ಟಿಯನ್ನು ಪರಿಶೀಲಿಸಲು ಹಾಗೂ ದೂರು ಸಲ್ಲಿಸಲು ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಹೀಗಾಗಿ ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಮಾರ್ಚ್ 20 ರವರೆಗೆ ಕಾಲಾವಕಾಶ ನೀಡುವಂತೆ ಕೋರಲಾಗಿದೆ.

ಇದನ್ನೂ ಓದಿ: ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತದ ಮಾಹಿತಿ ಇಲ್ಲಿದೆ

EPIC ಮೂಲಕ ಹುಡುಕಿ ಮತ್ತು ಹೆಸರಿನ ಮೂಲಕ ಹುಡುಕಿ ತಮ್ಮ ಹೆಸರು ಹಾಗೂ ಇತರೆ ಮಾಹಿತಿಯನ್ನು ಪರಿಶೀಲಿಸಿಕೊಂಡು ದೂರು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹೆಚ್ಚಿನ ಸಮಯವನ್ನು ಪಡೆಯಲು ಸಾರ್ವಜನಿಕರು, ರಾಜಕೀಯ ಪಕ್ಷಗಳು ಹಾಗೂ ವಸತಿ ಕಲ್ಯಾಣ ಸಂಘಗಳಿಂದ ದೂರವಾಣಿ ಮುಖಾಂತರ ಅರ್ಜಿ ಸಲ್ಲಿಸಲು ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶಕ್ಕಾಗಿ ಕೋರಿರುವ ಹಿನ್ನಲೆ ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಮಾರ್ಚ್ 30 ರವರೆಗೆ ಕಾಲಾವಕಾಶ ನೀಡುವಂತೆ ಕೋರಲಾಗಿದೆ. ಅದರಂತೆಯೇ ಇದೀಗ ರಾಜ್ಯ ಚುನಾವಣಾ ಆಯೋಗದ ಅನುಮತಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *