
ಚಿಕ್ಕಮಗಳೂರು, ಮಾರ್ಚ್ 19: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು (ಬ್ಲ್ಯಾಕ್ ಮ್ಯಾಜಿಕ್) ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ (ದೇವಾಲಯ) ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಸೇರಿದಂತೆ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.
ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂದೆ ವಾಮಾಚಾರ
ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಯಿತು ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.
ಇದನ್ನೂ ಓದಿ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ ನೋಡಿ ಸಿಬ್ಬಂದಿ ಶಾಕ್
ತೆಂಗಿನಕಾಯಿ, ಅರಿಶಿನ, ಕುಂಕುಮ, ನಾಣ್ಯ, ನಿಂಬೆ ಹಣ್ಣು ಸೇರಿದಂತೆ ಹಲವು ಪದಾರ್ಥಗಳನ್ನು ಬಳಸುತ್ತಾರೆ. ದೇವಾಲಯದ ಮುಂಭಾಗದಲ್ಲಿ ನಾಲ್ಕು ಕಲ್ಲುಗಳನ್ನು ಇಟ್ಟು ಪೂಜೆ ಮಾಡಲಾಯಿತು. ಹಬ್ಬದ ದಿನ ಪೂಜಾ ಕೈಂಕರ್ಯ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡೋಣ ಅಂತಾ ಮುಂಜಾನೆ ಬಂದ ಅರ್ಚಕರು ವಾಮಾಚಾರ ಕಂಡು ಬೆಚ್ಚಿಬಿದ್ದಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ
ಇನ್ನು ಕಳಸ ಸಮೀಪದ ಕಂಚಿಕೆರೆ ಕಾಲಭೈರವ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಭಕ್ತರಿದ್ದಾರೆ. ಹೊರ ಜಿಲ್ಲೆ ಸೇರಿದಂತೆ ಸ್ಥಳೀಯರು ಕಾಲಭೈರವನನ್ನ ನಂಬಿ ಪೂಜೆ ಮಾಡುತ್ತಾರೆ. ದೇವಸ್ಥಾನದ ಮುಂದೆಯೇ ವಾಮಾಚಾರ ಮಾಡಿರುವುದರಿಂದ ಕೋಪಗೊಂಡಿದೆ. ಕಳೆದ ವರ್ಷವೂ ವಾಮಾಚಾರ ನಡೆದ ಕಾಲಭೈರವ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. ಇಂದು ವಾಮಾಚಾರ ಮಾಡಲಾಗಿದೆ. ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದೆ. ಅದು ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಕಂಡುಬಂದಿದ್ದಾರೆ. ಕಳಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.
ದೇವಾಲಯದ ಮುಂಭಾಗದಲ್ಲಿ ವಾಮಾಚಾರ ಮಾಡಿರುವ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿಯವರಾ? ಅಥವಾ ಹೊರ ಭಾಗದವರಾ? ಅನ್ನೋ ಅನುಮಾನ ಸ್ಥಳೀಯರು ಮುಂದಿಟ್ಟಿದ್ದಾರೆ. ಪವಿತ್ರ ಭದ್ರಾ ನದಿ ಹಾಗೂ ಸುತ್ತಮುತ್ತ ಇರುವ ದೇವಸ್ಥಾನಗಳಲ್ಲಿ ಇತ್ತೀಚಿನ ದಿನಗಳಲ್ಲಿ ವಾಮಾಚಾರ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜನರು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.