ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ


ಚಿತ್ರದುರ್ಗದಲ್ಲಿ ಐವರ ಮೇಲೆ ಆಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ, ಮಾರ್ಚ್ 19: ಮಹಿಳೆಯ ಮೇಲೆ ಮಚ್ಚಿನಿಂದ ಹಲ್ಲೆ (ದಾಳಿ) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆಯಸಿಡ್ ದಾಳಿ (ಆಸಿಡ್ ದಾಳಿ) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಕೋಟೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ತಾಸಿನಾ ಬಾನು ಮತ್ತು ಸುಹೈಲ್ ಭಾಷಾ ಪ್ರೀತಿಸಿ ಮದುವೆಯಾಗಿದ್ದರು. ಚಿತ್ರದುರ್ಗದ ನೆಹರು ನಗರದ ನಿವಾಸಿ ಸುಹೈಲ್ ಭಾಷಾ ಆಟೋ ಚಾಲಕ. ಆದರೆ ಪತಿಯ ಕಿರುಕುಳದಿಂದ ಬೇಸತ್ತು ತಾಸಿನ ಕೆಲವು ತಿಂಗಳ ಹಿಂದೆ ಪತಿಯನ್ನ ತೊರೆದು ಬೆಂಗಳೂರಿಗೆ ಬಂದಿದ್ದರು. ರಂಜಾನ್ ಹಬ್ಬಕ್ಕೆಂದು ಇತ್ತ ಚಿತ್ರದುರ್ಗದಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದಿದ್ದರು. ಈ ವೇಳೆ ಸುಹೈಲ್ ಭಾಷಾ ದುಷ್ಕೃತ್ಯ ಮೆರೆದಿದ್ದಾರೆ. ತನ್ನೊಂದಿಗೆ ಸಂಬಂಧ ಕಡಿದುಕೊಂಡಿದ್ದಕ್ಕೆ ಕೃತ್ಯವೆಸಗಲಾಗಿದೆ ಎನ್ನಲಾಗುತ್ತಿದೆ.

ಆಸ್ತಿ ವಿಚಾರಕ್ಕೆ ಅಣ್ಣನಿಂದ ತಂಗಿಯ ಬರ್ಬರ ಕೊಲೆ

ಆಸ್ತಿ ವಿಚಾರಕ್ಕೆ ಅಣ್ಣನಿಂದ ತಂಗಿಯ ಬರ್ಬರ ಕೊಲೆ ನಡೆದಂತಹ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿಯಲ್ಲಿ ನಡೆದಿದೆ. ತಂಗಿ ಶಿವಕ್ಕ(45) ರನ್ನ ಅಣ್ಣ ಹನುಮಂತ ಯಲಿವಾಳ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆಗೈದಿದ್ದಾರೆ.

ಇದನ್ನೂ ಓದಿ: ಎದೆಯ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಮರಾಗಿ ಕೊಲೆ: ಭಾವಿ ಪತಿ ಅನುಮಾಕ್ಕೆ ಅಪ್ರಾಪ್ತ ಬಲಿ

ತಂದೆಯ ಆಸ್ತಿಯಲ್ಲಿ ನನಗೂ ಪಾಲಿದೆ ಎನ್ನುತ್ತಿದ ಶಿವಕ್ಕ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿದೆ. ಜಮೀನು ಪೂಜೆಗಾಗಿ ಹೋದಾಗ ಮರ್ಡರ್ ಮಾಡಲಾಯಿತು. ಧಾರವಾಡ ಗ್ರಾಮೀಣ ಠಾಣಾ ಚಿತ್ರ ಪ್ರಕರಣ ದಾಖಲಾಗಿದೆ.

ಆಲಿಕಲ್ಲು ಮಳೆಗೆ 25ಕ್ಕೂ ಹೆಚ್ಚು ಕುರಿಗಳ ಸಾವು

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಗೆ 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಹುಸೇನಸಾಬ್ ಬಂಗದ ಎಂಬುವರಿಗೆ ಕುರಿಗಳು. ಸೂಕ್ತ ಪರಿಹಾರ ನೀಡುವಂತೆ ಕುರಿಗಾಹಿ ಹುಸೇನಸಾಬ್ ಸರ್ಕಾರಕ್ಕೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *