ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ

ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ


ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ತರಾಟೆ

ಬೆಂಗಳೂರು, (ಮಾರ್ಚ್ 19): ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ (ಸರ್ಕಾರಿ ನೌಕರರ ವರ್ಗಾವಣೆ) ಸಿಎಂ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ (ಕರ್ನಾಟಕ ಹೈಕೋರ್ಟ್) ಆಕ್ಷೇಪ ವ್ಯಕ್ತಪಡಿಸಿದೆ. ಬೆಸ್ಕಾಂ ಎಐ ಎಸ್.ಚೇತನ್ ಎಂಬವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್, ಹಾಗೂ ಟಿ.ಎಂ.ನದಾಫ್ ಅವರಿದ್ದ ಪೀಠ, ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ)ಚಾಟಿ ಬೀಸಿದೆ. ಸಿಎಂಗೆ ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೆ ಬಿಡಬೇಕು. ಮುಖ್ಯಮಂತ್ರಿಗಳ ಕಚೇರಿಯ ವರ್ಗಾವಣೆಯ ಮನವಿ ಸ್ವೀಕರಿಸಬಾರದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೆ ಬಿಡಬೇಕು. ಮುಖ್ಯಮಂತ್ರಿಗಳ ಕಚೇರಿಯ ವರ್ಗಾವಣೆಯ ಮನವಿ ಸ್ವೀಕರಿಸಬಾರದು. ಇಂತಹ ವಿಚಾರಗಳಿಗೆ ಮುಖ್ಯಮಂತ್ರಿ ತಮ್ಮ ಸಮಯ ವಿನಿಯೋಗಿಸಬಾರದು ಎಂದು ಅಭಿಪ್ರಾಯಪಟ್ಟಿದ್ದು, ಈ ಆದೇಶದ ಪ್ರತಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಕೈವಾಡಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಸಿಎಂ ನೀಡುವ ವರ್ಗಾವಣೆ ಪತ್ರಗಳ ಬಗ್ಗೆ, ಸರ್ಕಾರದ ಮುಖ್ಯಕಾರ್ಯದರ್ಶಿ( ಸಿಎಸ್) ನಿಲುವು ಕೇಳಿತ್ತು. ಇದಕ್ಕೆ ಮುಖ್ಯ ಕಾರ್ಯದರ್ಶಿ ಸಹ ಉತ್ತರಿಸಿ, ಸಿಎಂ ಕಚೇರಿಯಿಂದ ನೀಡುವ ಟಿಪ್ಪಣಿಗಳು ಕೇವಲ ಶಿಫಾರಸುಗಳಷ್ಟೇ. ಸಂಬಂಧಪಟ್ಟ ಇಲಾಖೆ ವರ್ಗಾವಣೆ ಆದೇಶ ನೀಡಲಾಗಿದೆ ಎಂದು ಹೇಳಿದರು.

ಇಂಧನ ಇಲಾಖೆಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಿಎಂ ಕಚೇರಿ ಮುಂದಾಗಿತ್ತು. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪ ಮಾಡಿದೆ. ಇದರಿಂದ ಅಸಮಾಧಾನಗೊಂಡ ಕೆಜೆ ಜಾರ್ಜ್ ನಿವಾಸಕ್ಕೆ ತೆರಳಿ ಪ್ರಶ್ನಿಸಿದ್ದರು, ರಾಜೀನಾಮೆ ಬಗ್ಗೆ ಸಹ ಪ್ರಸ್ತಾಪಿಸಿದ್ದರು. ಆದರೆ, ಸಿದ್ದರಾಮಯ್ಯ ಸಿಎಂ ಜಾರ್ಚ್ ಅವರನ್ನು ಸಮಾಧಾನಪಡಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೀಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಎಲ್ಲಾ ಇಲಾಖೆಗಳಲ್ಲಿ ಮೂಗು ತೂರುತ್ತಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ, ಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ, ಮಾಡಬೇಕಾದ ಉತ್ತಮ ಕೆಲಸಗಳಿವೆ. ಅವರನ್ನು ಮಾಡಿ ಎಂದು ಟಾಂಗ್ ಕೊಟ್ಟಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *