ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!


ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್ ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದರು.

ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ಕಾಂತರಾಜು ಅವರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಅವರು ಕುಸಿದು ಬಿದ್ದಿರುವುದು ಮೃತನ ಗೆಳೆಯರು ಮತ್ತು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.

ಇದನ್ನೂ ಓದಿ: ಕರ್ನಾಟಕ ವಾಯು ಗುಣಮಟ್ಟ: ಮಲೆನಾಡಿನಲ್ಲಿ ಶುದ್ಧ ಗಾಳಿ! ನಿಮ್ಮ ನಗರದ AQI ಎಷ್ಟಿದೆ?

ಪೊಲೀಸರ ಮಾಹಿತಿ ಪ್ರಕಾರ, ಸಂಜೆ 5 ಗಂಟೆಗೆ ಆರು ಮಂದಿಯನ್ನು ಕರೆತರಲಾಯಿತು. ರಾತ್ರಿ 8:30ಕ್ಕೆ ವಿಚಾರಣೆ ಮುಗಿಸಿ ಕಳುಹಿಸಿದ ಬಳಿಕ ಕಾಂತರಾಜು ಅವರು ಠಾಣೆಯಿಂದ ಹೊರಬಂದ ಮೇಲೆ ಕಾಣಿಸಿಕೊಂಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಮೃತರ ಕುಟುಂಬಸ್ಥರ ದೂರು ಪಡೆಯುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *