
ದಾವಣಗೆರೆ, ಮಾರ್ಚ್ 20: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ನಲ್ಲಿ ತೀವ್ರಗೊಂಡಿದೆ. ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿರುವಾಗ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಅವರು, ರಣದೀಪ್ ಸುರ್ಜೇವಾಲ ಅವರು ರಾಜ್ಯಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚುನಾವಣಾ ತಂತ್ರ ರೂಪಿಸಲಿದ್ದಾರೆ. ಅದರ ನಡುವೆಯೇ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಸಚಿವ ಮಲ್ಲಿಕಾರ್ಜುನ್ ಅವರ ಸಮರ್ಥ್ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಸಚಿವರ ಕುಟುಂಬದ ಈ ನಿರ್ಧಾರ ಭಾರಿ ಕುತೂಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರವಾಗಿರಬಹುದು ಎಂಬ ಮಾತುಗಳು ಕೇಳಿಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.