Headlines

Rupee value: ರೂಪಾಯಿಗೆ ಬಿಗ್ ಶಾಕ್, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93ರ ಗಡಿ ದಾಟಿದ ಭಾರತೀಯ ಕರೆನ್ಸಿ ಮೌಲ್ಯ!

Rupee value: ರೂಪಾಯಿಗೆ ಬಿಗ್ ಶಾಕ್, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93ರ ಗಡಿ ದಾಟಿದ ಭಾರತೀಯ ಕರೆನ್ಸಿ ಮೌಲ್ಯ!


ರೂಪಾಯಿ ಮೌಲ್ಯ: ರೂಪಾಯಿಗೆ ಬಿಗ್ ಶಾಕ್, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 93ರ ಗಡಿ ದಾಟಿದ ಭಾರತೀಯ ಕರೆನ್ಸಿ ಮೌಲ್ಯ!

ಜನವರಿ, ಮಾರ್ಚ್ 20: ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡುಬಂದಿದೆ. ಸದ್ಯಕ್ಕೆ ರೂಪಾಯಿ ಮೌಲ್ಯ 93.19ಕ್ಕೆ ಕುಸಿದಿದೆ. ಕಚ್ಚಾತೈಲ ಬೆಲೆ ಏರಿಕೆ ಮತ್ತು ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿ ಈ ಕುಸಿತಕ್ಕೆ ಕಾರಣವಾಗಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 110 ಡಾಲರ್ ದಾಟಿದ್ದು, ಭಾರತ ತನ್ನ ತೈಲದ ಶೇ 80 ರಷ್ಟನ್ನು ಆಮದು ಮಾಡಿಕೊಳ್ಳುವುದರಿಂದ ಹೆಚ್ಚು ಡಾಲರ್‌ಗಳನ್ನು ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಯುದ್ಧದ ಭೀತಿಯಿಂದ ವಿದೇಶಿ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಹಣ ಹಿಂಪಡೆದುಕೊಳ್ಳುವ ಡಾಲರ್‌ಗಳಲ್ಲಿ ಹೂಡಿಕೆ ಮಾಡುತ್ತಿರುವ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

ಈ ಕುಸಿತದಿಂದಾಗಿ ಪೆಟ್ರೋಲ್, ಡೀಸೆಲ್, ಮೊಬೈಲ್, ಲ್ಯಾಪ್‌ಟಾಪ್ ಮತ್ತು ಖಾದ್ಯ ತೈಲಗಳಂತಹ ಆಮದು ವಸ್ತುಗಳ ಬೆಲೆ ಏರಿಕೆಯಾಗಲಿದೆ. ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವೆಚ್ಚವಾಗಲಿದೆ. ಹಣದುಬ್ಬರ ಮತ್ತು ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಿದೇಶಿ ವಿನಿಮಯವನ್ನು ನಿಧಿಯಿಂದ ಡಾಲರ್‌ಗಳನ್ನು ಮಾರಾಟ ಮಾಡುವ ಸಾಧ್ಯತೆಯಿದೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *