
19ನೇ ಐಪಿಎಲ್ ಸೀಸನ್‌ಗೂ ಮುನ್ನ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಅಪ್ಪನಾದ ಸಿಹಿ ಸುದ್ದಿ ನೀಡಿದ್ದಾರೆ. ಅವರು ಮತ್ತು ಅವರ ಪತ್ನಿ ಗುಂಜನ್ ಪಾಟೀದಾರ್ ಗಂಡು ಮಗುವನ್ನು ಸ್ವಾಗತಿಸಿದ್ದು, ಕಳೆದ ಸೀಸನ್ ಗೆದ್ದಿರುವ ಆರ್‌ಸಿಬಿ ಈ ಬಾರಿಯೂ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.
ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗೆ ನಾಯಕ ರಜತ್ ಪಾಟೀದಾರ್ ಗುಡ್ ನ್ಯೂಸ್ ನೀಡಿದ್ದಾರೆ. ಇದೀಗ ರಜತ್ ಪಾಟೀದಾರ್ ಹಾಗೂ ಗುಂಜನ್ ಪಾಟೀದಾರ್ ಇದೀಗ ಗಂಡು ಮಗುವಿಗೆ ಸ್ವಾಗತಿಸಿದ್ದಾರೆ. ಇದೀಗ ರಜತ್ ಪಾಟೀದಾರ್ ಹಾಗೂ ಗುಂಜನ್ ಪಾಟೀದಾರ್‌ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಕಳೆದ 17 ಸೀಸನ್‌ಗಳಿಂದ ಐಪಿಎಲ್ ಟ್ರೋಫಿ ಬರ ಅನುಭವಿಸುತ್ತಾ ಬಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಾಯಕನಾಗಿ ಮೊದಲ ಪ್ರಯತ್ನದಲ್ಲೇ ರಜತ್ ಪಾಟೀದಾರ್ ಕಪ್ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ದೇಶಿ ಕ್ರಿಕೆಟ್‌ನಲ್ಲೂ ಅದ್ಭುತ ಪ್ರದರ್ಶನದ ಮೂಲಕ ಟೀಂ ಇಂಡಿಯಾ ಬಾಗಿಲು ಬಡಿಯುತ್ತಿರುವ ರಜತ್ ಪಾಟೀದಾರ್, ಇದೀಗ 19ನೇ ಸೀಸನ್ ಐಪಿಎಲ್ ಟೂರ್ನಿಗೂ ಮುನ್ನ ಅಪ್ಪನಾಗಿ ಬಡ್ತಿ ಪಡೆದುಕೊಂಡಿದ್ದಾರೆ.
ಮತ್ತೊಂದು ಕಪ್ ಗೆಲ್ಲುವ ವಿಶ್ವಾಸದಲ್ಲಿ ಆರ್‌ಸಿಬಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಸಾಧಾರಣ ಪ್ರದರ್ಶನ ತೋರುವ ಮೂಲಕ ಬಲಾಢ್ಯ ತಂಡಗಳನ್ನು ಮಣಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಸೇರಿದಂತೆ ಸಾಕಷ್ಟು ಅಳೆದು ತೂಗಿ ಕೆಲವು ಆಟಗಾರರನ್ನು ಖರೀದಿಸಿದ್ದು ಮತ್ತೊಂದು ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.
ಹೆಣ್ಣು ಮಗುವನ್ನು ಸ್ವಾಗತಿಸಿದ್ದ ದಿನೇಶ್ ಕಾರ್ತಿಕ್:
ಇನ್ನು ನಿನ್ನೆಯಷ್ಟೇ ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ದಿನೇಶ್ ಕಾರ್ತಿಕ್ ಮೂರನೇ ಮಗುವಿಗೆ ತಂದೆಯಾಗಿದ್ದರು. ಈ ಮುದ್ದಾದ ಹೆಣ್ಣು ಮಗುವಿಗೆ ರಾಹಾ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಟ್ಟಿದ್ದಾರೆ.