ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ


ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (ಸ್ಯಾಂಕಿ ಟ್ಯಾಂಕ್) ಮುಂದೆ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್ (ಅಶ್ವಿನಿ ಪುನೀತ್ ರಾಜ್‌ಕುಮಾರ್) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್‌ಕುಮಾರ್. ‘ನಮ್ಮ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್‌ (ಪುನೀತ್ ರಾಜ್‌ಕುಮಾರ್). ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಸಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಿದ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಯಿತು. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಅಶ್ವತ್ಥ್ ನಾರಾಯಣ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *